ಕಲಬುರಗಿ: ಸದನದಲ್ಲಿ ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಅವರು ನಾನು ಹಣ ಪಡೆದು ಕೆಲಸ ಕೊಟ್ಟಿರುವುದಾಗಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಉನ್ನತ ಮಟ್ಟದ ತನಿಖೆ ಆಗಬೇಕು. ಈ ತನಿಖೆ ಮುಗಿಯುವವರೆಗೂ ನಾನು ಸದನಕ್ಕೆ ಹೋಗುವುದಿಲ್ಲ ಎಂದು ಶಾಸಕ ಬಿ.ಆರ್ ಪಾಟೀಲ್ (BR Patil) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ನಾನು ಪ್ರತಿಭಟನೆ ಮಾಡಿದ್ದೆ. ಆಗ ಯಾರೊಬ್ಬ ಶಾಸಕರೂ ನನ್ನ ಬೆಂಬಲಕ್ಕೆ ಬರಲಿಲ್ಲ. ನಮ್ಮ ಜಿಲ್ಲೆಯ ಶಾಸಕರು ಸಹ ನನ್ನ ಬೆಂಬಲಕ್ಕೆ ಬರಲಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಯಶವಂತರಾಯ ಪಾಟೀಲ್ ಮಾತ್ರ ನನ್ನ ಬೆಂಬಲಕ್ಕೆ ನಿಂತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಆರ್ ಪಾಟೀಲ್ ಎಮೋಷನಲ್ ಆಗಿ ಪತ್ರ ಬರೆದಿರಬಹುದು: ಎಂ.ಬಿ ಪಾಟೀಲ್
Advertisement
ಪಂಚರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಈ ವಿಷಯ ನಾನು ಪ್ರಸ್ತಾವನೆ ಮಾಡಿರಲಿಲ್ಲ. ಇದೀಗ ಈ ವಿಚಾರದ ಬಗ್ಗೆ ನಾನು ಮತ್ತೆ ಪತ್ರ ಬರೆದಿದ್ದೇನೆ. ನನ್ನ ಜೀವಮಾನದಲ್ಲಿ ಸ್ವಾಭಿಮಾನದಿಂದ ಬದುಕಿದವನು, ಇಲ್ಲದಿದ್ದರೆ ನಾನು ಸತ್ತಂತೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Advertisement
Advertisement
ನನ್ನ ಮೇಲೆ ಸಚಿವ ಕೃಷ್ಣ ಭೈರೇಗೌಡ ಅವರು ಮಾಡಿರುವ ಆರೋಪದ ತನಿಖೆಯಾಗಬೇಕು. ತನಿಖೆ ಮುಗಿಯುವವರೆಗೆ ನಾನು ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗುವುದಿಲ್ಲ. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಆಗಿರುವುದರಿಂದ ಈ ಬಾರಿ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಕೃಷ್ಣ ಭೈರೇಗೌಡರನ್ನು ಮತ್ತು ಅಧಿಕಾರಿಗಳನ್ನು ಕರೆಸಿ, ಈ ಬಗ್ಗೆ ತನಿಖೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
Advertisement
ನಾನು ಇಷ್ಟು ದಿನ ಎಲ್ಲಾ ರೀತಿಯ ಅವಮಾನಗಳನ್ನು ಸಹಿಸಿಕೊಂಡು ಬಂದಿದ್ದೇನೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಧಾನ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ನಾನು ಸಹ ಹಾಜರಾಗುತ್ತೇನೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಗಸ್ತು ವೇಳೆ ಹಫ್ತಾ ಪಡೆಯೋದು ಬಿಟ್ಟಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು: ಯತ್ನಾಳ್ ಕಿಡಿ