ಚಿಕ್ಕಮಗಳೂರು: ನಾನೊಬ್ಬ ರೈತನ (Farmer) ಮಗನಾಗಿದ್ದು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಚಿಕ್ಕಮಗಳೂರು ಶಾಸಕ ಹೆಚ್.ಡಿ ತಮ್ಮಯ್ಯ (H.D. Thammaiah) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ನಾನು ಒಬ್ಬ ರೈತರ ಮಗ. ಒಬ್ಬ ಕೃಷಿಕ ಈಗ ಶಾಸಕನಾಗಿದ್ದೇನೆ. ಕೃಷಿ ವಿಚಾರ ತಿಳಿಯಲು ವಿದೇಶ ಪ್ರವಾಸಕ್ಕೆ ಹೋಗಿತ್ತಿದ್ದೇನೆ (MLAs Foreign Study Tour) ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್
ಮೊದಲಿನಿಂದಲೂ ನಾನು ವಿದೇಶಕ್ಕೆ ಹೋಗಿ ಬರುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಕೃಷಿ ಹೇಗಿದೆ ಎಂದು ನೋಡಬೇಕು. ಹಾಗಾಗಿ ಪ್ರವಾಸಕ್ಕೆ ಹೋಗ್ತಾ ಇದಿನಿ. ಸಿದ್ದರಾಮಯ್ಯ (Siddaramaiah) ಆಪ್ತರು ಅಂತ ಏನಿಲ್ಲ, ನಾನು ಕುಟುಂಬ ಸಮೇತರಾಗಿ ಹೋಗುತ್ತಿದ್ದೇವೆ ಎಂದಿದ್ದಾರೆ.
ನಾನು ನನ್ನ ಖಾತೆಯಿಂದ ಟೂರ್ & ಟ್ರಾವೆಲ್ಸ್‌ಗೆ ಹಣ ವರ್ಗಾವಣೆ ಮಾಡಿದ್ದೇನೆ. ಹಾಗಾಗಿ ಇದು ನನ್ನ ಸ್ವಂತ ಖರ್ಚಿನಲ್ಲಿ ಹೋಗ್ತಾ ಇರೋದು. ನಾನು ಕುಟುಂಬ ಸಮೇತರಾಗಿ ಹೋಗ್ತಾ ಇದು. ಯಾರು ಬರ್ತಾರೋ ನೋಡೋಣ ಎಂದಿದ್ದಾರೆ. ಇದನ್ನೂ ಓದಿ: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

