ಬೆಂಗಳೂರು: ಕಳೆದ 4 ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ (Online Betting Case) ಇಡಿ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ದಾಳಿ ನಡೆಸಿದ ಬಳಿಕ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದು ಫ್ರೀಜ್ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು.
ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣದ ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್ ಮಾಡಲಾಗಿದೆ.

