ಬಳ್ಳಾರಿ: ಬಳ್ಳಾರಿ ಲೊಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಶಾಸಕ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕ್ಷಾಂಕಿಯಾಗಿದ್ದ ವೆಂಕಟೇಶ್ ಪ್ರಸಾದ್, ಈ ಬಾರಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ.
Advertisement
Advertisement
ಅಲ್ಲದೆ ಸಹೋದರ ವೆಂಕಟೇಶ್ ಪ್ರಸಾದ್, ಬಿಜೆಪಿ ಸೇರ್ಪಡೆಗೆ ಶಾಸಕ ನಾಗೇಂದ್ರ ಬೆಂಬಲ ಸಹ ಇದೆ. ಶಾಸಕ ನಾಗೇಂದ್ರ ಬಹಿರಂಗವಾಗಿ ಬಿಜೆಪಿ ಪರ ಪ್ರಚಾರ ಮಾಡದಿದ್ದರೂ ಕ್ಲೋಸ್ ಡೋರ್ ಮೂಲಕ ಬಿಜೆಪಿಯ ಪರ ಕೆಲಸ ಮಾಡುವುದಂತೂ ಖಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‍ಗೆ ಬಹುದೊಡ್ಡ ಆಘಾತವಾಗಿದೆ.
Advertisement
ಬಂಡಾಯ ಶಾಸಕರಲ್ಲಿ ಗುರುತಿಸಿಕೊಂಡಿದ್ದ ನಾಗೇಂದ್ರ ವಿರುದ್ಧ ಪಕ್ಷದ ವಿಪ್ ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಸ್ಪೀಕರ್ ಗೆ ದೂರು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಕಮಲ ಹಿಡಿಯಲು ಹಿಂದೇಟು ಹಾಕಿದ್ದು, ಪರ್ಯಾಯವಾಗಿ ಸೋದರನನ್ನು ಬಿಜೆಪಿ ಸೇರಿಸುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಂಡಾಯ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದೂವರೆಗೂ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲಾವಕಾಶ ತೆಗೆದುಕೊಂಡು ಶಾಸಕ ನಾಗೇಂದ್ರ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv