LatestLeading NewsMain PostNational

ದಲಿತ ವಿದ್ಯಾರ್ಥಿ ಸಾವಿನಿಂದ ಮನನೊಂದು ಕಾಂಗ್ರೆಸ್ ಶಾಸಕ ರಾಜೀನಾಮೆ

ಜೈಪುರ: ತನ್ನ ಕ್ಷೇತ್ರ ವ್ಯಾಪ್ತಿಯಲ್ಲೇ ಶಾಲಾ ಶಿಕ್ಷಕರಿಂದ ಥಳಿತಕ್ಕೊಳಗಾಗಿ ಮೃತಪಟ್ಟಿರುವ ಘಟನೆಯಿಂದ ಮನನೊಂದಿರುವ ಕಾಂಗ್ರೆಸ್ ಶಾಸಕ ಪಾನ್‌ಚಂದ್ ಮೇಘವಾಲ್ ತನ್ನ ವಿಧಾನ ಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಾಸ್ಥಾನ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಸ್ಪೀಕರ್ ಸಿ.ಪಿ ಜೋಶಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ದಲಿತ ವಿದ್ಯಾರ್ಥಿಯ ಸಾವಿನಿಂದ ನೋವಾಗಿದೆ ಎಂದೂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪಾನ್‌ಚಂದ್ ಮೇಘವಾಲ್ ಎರಡು ಬಾರಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. ಇದನ್ನೂ ಓದಿ:  ಡ್ರಗ್ಸ್ ಸೇವಿಸಿ ಕಾರು ಅಪಘಾತ ಮಾಡಿಕೊಂಡಿದ್ದ ಖ್ಯಾತ ನಟಿ ಕೊನೆಗೂ ಉಳಿಯಲಿಲ್ಲ: ನಟಿಯ ನಿಧನಕ್ಕೆ ಹಾಲಿವುಡ್ ಕಂಬನಿ

ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವಂತೆ ನಾನು ಒತ್ತಾಯಿಸಿದ್ದೇನೆ. 24 ಗಂಟೆ ಕಳೆದರೂ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದರಿಂದ ರಾಜೀನಾಮೆ ನೀಡಿರುವುದಾಗಿ ಶಾಸಕ ತಿಳಿಸಿದ್ದಾರೆ.

ದೇಶವು ಸ್ವಾತಂತ್ರ‍್ಯ ಪಡೆದು 75 ವರ್ಷ ಪೂರೈಸಿ, ಅಮೃತ ಮಹೋತ್ಸವ ಆಚರಿಸಿದೆ. ಇಷ್ಟು ವರ್ಷಗಳ ನಂತರವೂ ದಲಿತರ ಹಾಗೂ ಶೋಷಿತ ವರ್ಗಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ತನಗೆ ತೀವ್ರ ನೋವುಂಟು ಮಾಡಿವೆ. ದಲಿತರ ಮೇಲಿನ ದೌರ್ಜನ್ಯದ ಹೆಚ್ಚಿನ ಪ್ರಕರಣಗಳಲ್ಲಿ ಅಂತಿಮ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಆಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಖಿ ಕಟ್ಟಿಸಿಕೊಳ್ಳಲು ಸಹೋದರಿ ಮನೆಗೆ ಹೊರಟ್ಟಿದ್ದವನ ಜೀವ ತೆಗೆದ ಗಾಳಿಪಟ ದಾರ

ನಮ್ಮ ಸಮಾಜದ ಹಕ್ಕುಗಳನ್ನು ರಕ್ಷಿಸಲು ನಾವು ವಿಫಲರಾದಾಗ ಅಧಿಕಾರದಲ್ಲಿವುದರಲ್ಲಿ ಯಾವುದೇ ಅರ್ಥವಿಲ್ಲ. ನನ್ನ ಆತ್ಮಸಾಕ್ಷಿಯಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ಹುದ್ದೆಗಳ ಹಂಗಿಲ್ಲದೆ ಸಮಾಜದ ಶೋಷಿತ ವರ್ಗದ ಪರವಾಗಿ ಹೋರಾಡುವ ಸಲುವಾಗಿ ನನ್ನ ರಾಜೀನಾಮೆ ಅಂಗೀಕರಿಸಿ ಎಂದು ಮನವಿ ಮಾಡಿದ್ದಾರೆ.

ಏನಿದು ಘಟನೆ?
ಕುಡಿಯುವ ನೀರಿನ ಮಡಿಕೆ ಮುಟ್ಟಿದ್ದರ ಕಾರಣಕ್ಕಾಗಿ ಖಾಸಗಿ ಶಾಲೆಯ ಶಿಕ್ಷಕರೊಬ್ಬರು 9 ವರ್ಷದ ಪರಿಶಿಷ್ಟ ಜಾತಿಯ ಬಾಲಕ ಇಂದ್ರ ಮೇಘವಾಲ್‌ನನ್ನು ಹೊಡೆದಿದ್ದರು. ಇದರಿಂದ ಬಾಲಕ ಕಳೆದ ಶನಿವಾರ ಅಂದ್ರೆ ನಾಲ್ಕು ದಿನಗಳ ಹಿಂದೆ ಮೃತಪಟ್ಟಿದ್ದ. ಜುಲೈ 20ರಂದು ಬಾಲಕನ ಮೇಲೆ ಹಲ್ಲೆ ನಡೆದಿತ್ತು. ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಲಾಗಿತ್ತು.

Live Tv

Leave a Reply

Your email address will not be published.

Back to top button