ರಾಯಚೂರು: ಕಾಂಗ್ರೆಸ್‍ನ ಮತ್ತೊಬ್ಬ ಅತೃಪ್ತ ಶಾಸಕರು ಮುಂಬೈಗೆ ಶಿಫ್ಟ್ ಆಗಿದ್ದು, ಈ ಬೆಳವಣಿಗೆ ಮೈತ್ರಿ ಸರ್ಕಾರವನ್ನು ಮತ್ತಷ್ಟು ಗೊಂದಲಕ್ಕೆ ಗುರಿಮಾಡಿದೆ.
ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್‍ಗೌಡ ಪಾಟೀಲ್ ಅವರು ಮಂಗಳವಾರ ಸಂಜೆ ಮುಂಬೈಗೆ ತೆರಳಿದ್ದಾರೆ. ಶಾಸಕರು ಹಾಗೂ ಪಕ್ಷದ ನಾಯಕರು ನಡುವೆ ಭಿನ್ನಮತ ಕಾಣಿಸಿಕೊಂಡಿದ್ದು, ಈಗಾಗಲೇ ಮುಂಬೈನ ಖಾಸಗಿ ಹೋಟೆಲ್‍ನಲ್ಲಿರುವ ಆರು ಜನ ಶಾಸಕರನ್ನು ಪ್ರತಾಪ್‍ಗೌಡ ಸೇರಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Advertisement
Advertisement
ಪಕ್ಷೇತರ ಶಾಸಕರ ಬೆಂಬಲವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮಾಡಿ, ಮೊದಲ ಹಂತದ ಆಪರೇಷನ್ ಕಮಲದಲ್ಲಿ ಯಶಸ್ವಿಯಾದ ಬಿಜೆಪಿ ನಾಯಕರು ಬುಧವಾರ ಎರಡನೇ ಹಂತ ಆಪರೇಷನ್ ಕಮಲ ನಡೆಸಲು ಮುಂದಾಗಲಿದ್ದಾರಂತೆ. ಎರಡನೇ ಹಂತದಲ್ಲಿ ಅತೃಪ್ತ ಕಾಂಗ್ರೆಸ್‍ನ ಆರು ಜನ ಶಾಸಕರಿಂದ ರಾಜೀನಾಮೆ ಕೊಡಿಸಲು ಬಿಜೆಪಿ ರೂಪಿಸಿದ್ದ ಮೆಗಾ ಪ್ಲಾನ್‍ಗೆ ಪ್ರತಾಪ್‍ಗೌಡ ಪಾಟೀಲ್ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜೀನಾಮೆ ನೀಡುವ ಶಾಸಕರ ಸಂಖ್ಯೆ 6ರಿಂದ 7ಕ್ಕೆ ಏರಿಕೆ ಕಂಡಿದೆ ಎನ್ನಲಾಗುತ್ತಿದೆ.
Advertisement
ಆ 6 ಮಂದಿ ಯಾರು?
ಸಚಿವ ಸ್ಥಾನ ಕಳೆದುಕೊಂಡ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್, ಕಂಪ್ಲಿಯ ಜೆ.ಎನ್, ಗಣೇಶ್ ಹಾಗೂ ಚಿಂಚೋಳಿ ಶಾಸಕ ಉಮೇಶ್ ಜಾದವ್ ಕಾಂಗ್ರೆಸ್‍ಗೆ ಗುಡ್‍ಬೈ ಹೇಳುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv