ಚಿತ್ರದುರ್ಗ: ಜಿಲ್ಲೆಯ ಸಮಸ್ಯೆಗಳು ಬಗೆಹರಿಸಲು ಸಚಿವ ಸ್ಥಾನ ಕೇಳಿದ್ದು, ಆದರೆ ನಿಗಮ ಮಂಡಳಿ ಸ್ಥಾನ ನೀಡಿದ್ದಾರೆ. ಅದ್ದರಿಂದ ನಾನು ಮಂಡಳಿಯ ಸ್ಥಾನಮಾನ ಬೇಡ ಎಂದು ಹೈಕಮಾಂಡ್‍ಗೆ ಹೇಳುವುದಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ ತಿಳಿಸಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಅವರು, ಸಚಿವ ಸ್ಥಾನ ಸಿಗದೇ ನಿರಾಸೆಯಾಗಿದ್ದು, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ ಎಂದು ಹೇಳುತ್ತೇನೆ. ಜಿಲ್ಲೆಯಲ್ಲಿ ಒಬ್ಬರಿಗಾದರು ಸಚಿವ ಸ್ಥಾನ ನೀಡಬೇಕು ಎಂಬುವುದು ಮಾತ್ರ ನಮ್ಮ ಬೇಡಿಕೆ ಆಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ನನಗೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ. ಆದರೆ ಬರದನಾಡು ಅಭಿವೃದ್ಧಿಗಾಗಿ ಸಚಿವ ಸ್ಥಾನ ನೀಡಬೇಕಿತ್ತು. ಸ್ಥಳೀಯ ಕಾಂಗ್ರೆಸ್ ಶಾಸಕ ಒಬ್ಬರು ಇರುವುದರಿಂದ ಚಿತ್ರದುರ್ಗಕ್ಕೆ ಆದ್ಯತೆ ನೀಡಬೇಕಿತ್ತು. ಆದರೆ ಈ ಬಾರಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ನನಗೆ ನಿಗಮ ಮಂಡಳಿ ಸ್ಥಾನಮಾನ ಬೇಡ. ನಾನು ಕೇವಲ ಕ್ಷೇತ್ರದ ಶಾಸಕನಾಗಿ ಉಳಿಯುತ್ತೇನೆ. ಮುಂದೇ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡುವುದಿಲ್ಲ ಎಂದರು.
Advertisement
ಇತ್ತ ಕಲಬುರಗಿಯ ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್‍ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಚಿಂಚೊಳ್ಳಿಯಲ್ಲೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಸ್ಥಾನ ಕೈ ತಪ್ಪಿದ್ದನ್ನ ಖಂಡಿಸಿ ಚಿಂಚೊಳ್ಳಿ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv