ರಾಯಚೂರು: ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ಪೊಲೀಸರು ತಡೆದ ಘಟನೆ ನಡೆದಿದ್ದು, ಪೊಲೀಸರ ವರ್ತನೆಗೆ ‘ಕೈ’ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಪಶು ಮೇಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಕುಮಾರಸ್ವಾಮಿ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಹಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರು ಸಿಎಂ ಬಳಿ ಮನವಿ ನೀಡಲು ಮುಂದಾಗಿದ್ದರು. ಆದರೆ ಜನರ ಅರ್ಜಿ ಸ್ವೀಕರಿಸುತ್ತಿದ್ದ ಸಿಎಂ ಅವರ ಬಳಿ ತೆರಳಲು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮುಂದಾಗಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ.
Advertisement
Advertisement
ನಮ್ಮ ಕ್ಷೇತ್ರದ ಜನರೂ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದಾರೆ. ಆ ಸಮಸ್ಯೆ ಏನು ಅಂತಾ ನಮಗೆ ಗೊತ್ತಾಗುವುದು ಬೇಡವಾ ಎಂದು ಪ್ರಶ್ನಿಸಿ ಶಾಸಕ ಬಸನಗೌಡ ದದ್ದಲ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಪೊಲೀಸರು ಶಾಸಕರನ್ನು ಸಮಾಧಾನ ಪಡಿಸಲು ಮುಂದಾದರು. ಇದನ್ನು ಕಂಡ ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಅಸಂವಿಧಾನಿಕ ಪದ ಬಳಕೆ ಮಾಡಿ ಮಾತನಾಡಿದರು.
Advertisement
ಸಿಎಂ ಜಿಲ್ಲೆಯ ಸಮಸ್ಯೆಯ ಬಗ್ಗೆ ಅಹವಾಲು ಸ್ವೀಕರಿಸುವಾಗ ಏಕಾಂಗಿಯಾಗಿ ನಿಂತಿದ್ದ ಕಾಂಗ್ರೆಸ್ ಶಾಸಕರು ಜಿಲ್ಲಾಧ್ಯಕ್ಷರ ಮಾತು ಕೇಳಿ ಮತ್ತಷ್ಟು ಗರಂ ಆದರು. ಅಲ್ಲದೇ ಸ್ಥಳದಲ್ಲೇ ಬಹಿರಂಗ ಕ್ಷಮೆ ಕೇಳುವಂತೆ ಪಟ್ಟು ಹಿಡಿದರು. ಬಳಿಕ ಜಿಲ್ಲಾಧ್ಯಕ್ಷ ವಿರುಪಾಕ್ಷಿ ಅವರು ಕ್ಷಮೆ ಯಾಚಿಸಿದರು. ದೋಸ್ತಿಗಳ ಈ ಮಾತು ನೆರೆದಿದ್ದ ಸಾರ್ವಜನಿಕರ ಎದುರು ಅಪಹಾಸ್ಯಕ್ಕೆ ಈಡಾಗುವಂತೆ ಮಾಡಿತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv