ಶಿವಮೊಗ್ಗ: ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ ಮುಸ್ಲಿಂ (Muslim) ಆಗಿಯೇ ಹುಟ್ಟಬೇಕು ಎನ್ನುವ ಮೂಲಕ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ (BK Sangamesh) ತಮ್ಮ ಇಸ್ಲಾಂ ಬಗೆಗಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಸೋಮವಾರ ನಡೆದ ಈದ್‌ಮಿಲಾದ್ (Eid Milad) ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನನ್ನು ಜನರು 4 ಬಾರಿ ಗೆಲ್ಲಿಸಿದ್ದಾರೆ. ನಾನು ಎಂದಿಗೂ ನಿಮ್ಮ ಮನೆಮಗನಾಗಿರುತ್ತೇನೆ. ಮುಂದಿನ ಜನ್ಮ ಅಂತ ಇದ್ರೆ ನಾನು ಮುಸ್ಲಿಂ ಆಗಿಯೇ ಹುಟ್ಟಬೇಕು ಎಂದಿದ್ದಾರೆ. ಇದನ್ನೂ ಓದಿ: ಭದ್ರಾವತಿ ಈದ್ ಮೆರವಣಿಗೆಯಲ್ಲಿ ಪಾಕ್ ಪರ ಘೋಷಣೆ
ಇದೇ ವೇಳೆ ತಮ್ಮ ಪುತ್ರ ಗಣೇಶನ ಮೇಲೆಯೂ ನಿಮ್ಮ ಆಶೀರ್ವಾದ ಇರಲಿ ಎನ್ನುವ ಮೂಲಕ ಮುಂದಿನ ಚುನಾವಣೆಯಲ್ಲಿ ಪುತ್ರನನ್ನು ಭದ್ರಾವತಿಯಲ್ಲಿ ಕಣಕ್ಕಿಳಿಸುವ ಸುಳಿವನ್ನು ಸಹ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್
ಇದೀಗ ಶಾಸಕ ಸಂಗಮೇಶ್ ಇಸ್ಲಾಂ ಪ್ರೀತಿಯ ಹೇಳಿಕೆಯ ವೀಡಿಯೋ ವೈರಲ್ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.