ದಾವಣಗೆರೆ ಕಾಂಗ್ರೆಸ್‌ನಲ್ಲಿ ಅಸಮಾಧಾನ – ಉಸ್ತುವಾರಿ ಮಲ್ಲಿಕಾರ್ಜುನ್‌ ಬದಲಾಯಿಸುವಂತೆ ಶಿವಗಂಗಾ ಬಸವರಾಜ್ ಪತ್ರ

Public TV
1 Min Read
Congress MLA Sivaganga Basavaraj writes to replace Davangere in charge SS Mallikarjun

ದಾವಣಗೆರೆ: ಆಡಳಿತರೂಢ ಕಾಂಗ್ರೆಸ್‌ನಲ್ಲಿ (Congress) ಶಾಸಕರ ಅಸಮಾಧಾನ ಭುಗಿಲೆದ್ದಿದೆ. ದಾವಣಗೆರೆ (Davanagere) ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ (SS Mallikarjun) ಅವರನ್ನು ಬದಲಾಯಿಸುವಂತೆ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ (Shivaganga Basavaraj) ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಬಿಜೆಪಿ ಜೊತೆ ನಿರಂತರವಾಗಿ ಹೊಂದಾಣಿಕೆ ರಾಜಕಾರಣ (Adjustment Politics) ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಮುಖಂಡರಿಗೆ ಮುಜುಗರವಾಗುತ್ತಿದೆ. ವರ್ಗಾವಣೆ ವಿಚಾರವಾಗಿ ಸಿಎಂ ಸಹಿ ಮಾಡಿ ಅನಮೋದಿಸಿ ಆದೇಶ ಹೊರಡಿಸಿದರೂ ಜಿಲ್ಲಾ ಉಸ್ತುವಾರಿ ಸಚಿವರು ಬ್ರೇಕ್ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

Congress MLA Sivaganga Basavaraj writes to replace Davangere in charge SS Mallikarjun 2

ದೂರಿನಲ್ಲಿ ಏನಿದೆ?
ಲೋಕೋಪಯೋಗಿ ಇಲಾಖೆ ಎಫ್‌ಡಿಎಯನ್ನು ವರ್ಗಾವಣೆ ಮಾಡುವಂತೆ ಸಿಎಂ ಕಡೆಯಿಂದ ಆದೇಶ ಮಾಡಿಸಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಆದೇಶವನ್ನು ತಡೆಹಿಡಿದಿದ್ದಾರೆ.

ಬಿಜೆಪಿ ಬೆಂಬಲಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಕಾಂಗ್ರೆಸ್ ಶಾಸಕರುಗಳ ಬಗ್ಗೆ ಅಗೌರವದಿಂದ ಮಾತನಾಡುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ . ದಾವಣಗೆರೆ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಚನ್ನಗಿರಿ ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸದೇ ಬಿಜೆಪಿ ಮಾಜಿ ಶಾಸಕರ ಬೆಂಬಲಿಗನಿಗೆ ಗೆಲುವಿಗೆ ಪರೋಕ್ಷವಾಗಿ ಸಹಕರಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಯೋಜನೆಗೆ ಸಿದ್ಧಗಂಗಾ ಮಠಕ್ಕೆ `ಕರೆಂಟ್’ ಶಾಕ್ – 70 ಲಕ್ಷ ವಿದ್ಯುತ್ ಬಿಲ್ ಕಟ್ಟುವಂತೆ KIADB ಪತ್ರ

Congress MLA Sivaganga Basavaraj writes to replace Davangere in charge SS Mallikarjun 1

ರಾಜ್ಯ ಅಪೆಕ್ಸ್ ಬ್ಯಾಂಕ್‌ಗೆ ಜಿಲ್ಲೆಯಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಲು ಕಾಂಗ್ರೆಸ್ ಶಾಸಕರ ಮಗನಿಗೆ ಅವಕಾಶವಿದ್ದರೂ ಉಸ್ತುವಾರಿ ಸಚಿವರು ಬಿಜೆಪಿಯವರನ್ನು ಬೆಂಬಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಎಸ್ ಎಸ್ ಮಲ್ಲಿಕಾರ್ಜುನ ಗೆದ್ದು ಶಾಸಕರಾಗಿರುವ ಕ್ಷೇತ್ರದಲ್ಲೇ ಬಿಜೆಪಿ ಲೋಕಸಭಾ ಅಭ್ಯರ್ಥಿ 25 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಪಕ್ಷಕ್ಕೆ ಹಿನ್ನಡೆಯಾಗಿದೆ.

ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಮುಜುಗರವಾಗಬಹುದು. ಈ ಎಲ್ಲಾ ಕಾರಣಗಳಿಂದ ದಾವಣಗೆರೆ ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸಬೇಕು.

Share This Article