Bengaluru City
ಮಹಿಳಾ ಪೊಲೀಸ್ ಮೇಲೆ ಸೌಮ್ಯ ರೆಡ್ಡಿ ದಬ್ಬಾಳಿಕೆ

ಬೆಂಗಳೂರು: ಜಯನಗರದ ಕಾಂಗ್ರೆಸ್ ಶಾಸಕಿ ಶಾಸಕಿ ಸೌಮ್ಯ] ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.
ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್ನಲ್ಲಿ ಸಮಾವೇಶದ ಬಳಿಕ ರಾಜಭವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್ ನಾಯಕರನ್ನು ತಡೆದಿದ್ದಾರೆ.
ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯ ರೆಡ್ಡಿ “ಹೂ ದಿ ಹೆಲ್” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ ಕೈ ಎತ್ತಿದ್ದಾರೆ.
ತಳ್ಳಾಟ ನೂಕಾಟದಿಂದ ಕೋಪಗೊಂಡಿದ್ದ ಸೌಮ್ಯ ರೆಡ್ಡಿ ಹಲ್ಲೆ ಮಾಡಿ ಮಾಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಳಿ ಮಹಿಳಾ ಪೇದೆ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.
ನಾಯಕರ ಜೊತೆ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.
