ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಸಕ ಡಾ. ಕೆ.ಸುಧಾಕರ್ ಸಿಕ್ಕಾಪಟ್ಟೆ ಕಿರುಕುಳ ಕೊಡುತ್ತಿದ್ದಾರೆಂದು ಜೆಡಿಎಸ್‍ನ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರು ಎಚ್. ಡಿ. ದೇವೇಗೌಡರ ಬಳಿ ಅವಲತ್ತುಕೊಂಡಿದ್ದಾರೆ.
ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ನಡೆದ ಚಿಂತನ-ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಸುಧಾಕರ್ ವರ್ತನೆ ಎಂತಹದ್ದು ಎಂದು ಎಲ್ಲರಿಗೂ ಗೊತ್ತು. ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಅಧಿಕಾರಿಗಳ ಬಳಿ ಹೋದರೆ ಯಾವುದೇ ನ್ಯಾಯ ಸಿಗುತ್ತಿಲ್ಲ. ಪ್ರಮುಖವಾಗಿ ಪೊಲೀಸರ ಬಳಿ ಹೋದರೆ ಕಾರ್ಯಕರ್ತರಿಗೆ ನ್ಯಾಯವೇ ಸಿಗುತ್ತಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
Advertisement
Advertisement
ಜೆಡಿಎಸ್ ಕಾರ್ಯಕರ್ತರನ್ನ ವಿನಾಕಾರಣ ಅರೆಸ್ಟ್ ಮಾಡಿಸಿ ಕಿರುಕುಳ ನೀಡಲಾಗುತ್ತಿದ್ದು, ಹೋರಾಟ ಮಾಡಿ ಕಾರ್ಯಕರ್ತರನ್ನ ಬಿಡಿಸಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರವಿದ್ದರೂ, ಕ್ಷೇತ್ರದಲ್ಲಿ ಜೆಡಿಎಸ್ ನವರಿಗೆ ಉಸಿರುಗಟ್ಟಿಸುವಂತಹ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಸಂಘಟನೆ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಉಳಿವಿಗಾಗಿ ಎಚ್.ಡಿ.ದೇವೇಗೌಡರೇ ಅಭ್ಯರ್ಥಿಯಾಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv