ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯ ರಾಜೀನಾಮೆ ಇಂದು ಬಿರುಗಾಳಿ ಎಬ್ಬಿಸಿದೆ. ಇದರ ಬೆನ್ನಲ್ಲೇ ಈ ಹಿಂದಿನಿಂದಲೂ ಸರ್ಕಾರದ ವಿರುದ್ಧ ಅತೃಪ್ತಿ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್ ಶಾಸಕರಾದ ಭೀಮಾನಾಯ್ಕ್, ಪ್ರತಾಪ್ ಗೌಡ ಪಾಟೀಲ್, ಅಮರೇಗೌಡ ಬಯ್ಯಾಪುರ ಇಂದು ಸಂಜೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾಂಗ್ರೆಸ್ ಪಕ್ಷದ ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಮೂವರು ಶಾಸಕ ನಡೆ ಕುತೂಹಲಕ್ಕೆ ಕಾರಣವಾಗಿದೆ.
Advertisement
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಭೀಮಾನಾಯ್ಕ್ ಅವರು, ಸಾಕಷ್ಟು ಬಾರಿ ನಾನು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದೇನೆ. ಆನಂದ್ ಸಿಂಗ್ ಅವರು ಬೆಳಗ್ಗೆ ರಾಜೀನಾಮೆ ನೀಡಿದ ಬಳಿಕವೂ ನಾನು ಸ್ಪಷ್ಟನೆ ನೀಡಿದ್ದೆ. ಅವರ ಮನವೊಲಿಕೆ ಮಾಡುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಹೇಳಿದ್ದೆ. ಆದರೆ ಇಂದಿಗೂ ಮಾಧ್ಯಮಗಳ ಅತೃಪ್ತ ಪಟ್ಟಿಯಲ್ಲಿ ನಮ್ಮ ಹೆಸರಿದೆ. ನಾವು ಕಾಂಗ್ರೆಸ್‍ನಲ್ಲಿಯೇ ಮುಂದುವರಿಯುತ್ತೇವೆ ಎಂದು ಹೇಳುತ್ತೇನೆ. ಯಾವುದೇ ಕಾರಣಕ್ಕೂ ಮಾಧ್ಯಮಗಳು ಆಪರೇಷನ್ ಕಮಲ ಹೆಸರಿನಲ್ಲಿ ನಮ್ಮ ಹೆಸರು ಪ್ರಸ್ತಾಪ ಮಾಡಬೇಡಿ ಎಂದರು.
Advertisement
Advertisement
ನಮಗೂ ಮಾನ, ಮರ್ಯಾದೆ ಇದೆ:
ಈ ವೇಳೆ ಮಾತನಾಡಿದ ಅಮರೇಗೌಡ ಬಯ್ಯಾಪುರ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅವರ ಹಕ್ಕು. ಆದರೆ ರಾಜೀನಾಮೆ ನೀಡಿದ ಬಳಿಕ ಎಲ್ಲಿ ಹೋಗುತ್ತಾರೆ ಎಂಬುವುದು ಕೂಡ ಅವರ ವೈಯಕ್ತಿಕ ಅಭಿಪ್ರಾಯ. ಆದರೆ ಶಾಸಕರ ರಾಜೀನಾಮೆ ಹಿಂದೆ ನನ್ನ ಕೈವಾಡ ಇದೆ. ನಾನು ರಾಜೀನಾಮೆ ನೀಡುತ್ತೇನೆ ಎಂಬುವುದು ಸುಳ್ಳು. ಆದ್ದರಿಂದ ಮಾಧ್ಯಮಗಳಿಗೆ ಕೈ ಮುಗಿದು ಮನವಿ ಮಾಡುತ್ತೇನೆ ನನ್ನ ಹೆಸರನ್ನು ಆತೃಪ್ತರ ಪಟ್ಟಿಯಲ್ಲಿ ಪ್ರಸ್ತಾಪ ಮಾಡಬೇಡಿ ಎಂದು ಮನವಿ ಮಾಡಿದರು.
Advertisement
ಸದ್ಯ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ರಾಜೀನಾಮೆ ಅವರು ವೈಯಕ್ತಿಕ ವಿಚಾರವಾಗಿ ರಾಜೀನಾಮೆ ನೀಡಿದ್ದಾರೆ. ಇದರಿಂದ ನಾವು ನಾವು ಬಿಜೆಪಿಗೆ ಹೋಗುವ ಅನಿವಾರ್ಯತೆ ಇಲ್ಲ. ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟು ಕ್ಷೇತ್ರದಲ್ಲಿ ಗೆಲ್ಲಿಸಿಕೊಂಡು ಬಂದಿದೆ. ಆದ್ದರಿಂದ ಪಕ್ಷದಲ್ಲೇ ಮುಂದುವರಿಯುತ್ತೇವೆ. ಯಾವುದೇ ಅತೃಪ್ತರ ಗುಂಪಿನಲ್ಲಿ ನಾವಿಲ್ಲ. ನಮಗೆ ಮಾನ ಮಾರ್ಯದೆ. ಇದೇ ಪಕ್ಷ ಬಿಡುವ ಯೋಚನೆಯೇ ಇಲ್ಲ ಎಂದರು.