ಚಿಕ್ಕಮಗಳೂರು: ರಸ್ತೆ ದುರಸ್ತಿ (Road Repair) ಮಾಡಿಸಿದ್ದು ಪಟ್ಟಣ ಪಂಚಾಯತ್‌ನ (Panchayat) ಹಣದಲ್ಲಿ. ಆದರೆ, ಬ್ಯಾನರ್ ಹಾಕಿಸಿಕೊಂಡಿದ್ದು ಶಾಸಕರು. ಇಂತಹದ್ದೊಂದು ನಗೆಪಾಟಲಿನ ಘಟನೆಗೆ ಜಿಲ್ಲೆಯ ಕೊಪ್ಪ (Koppa) ಪಟ್ಟಣ ಸಾಕ್ಷಿಯಾಗಿದೆ.
ಕೊಪ್ಪ ಪಟ್ಟಣದಲ್ಲಿ ರಸ್ತೆ ಸಾಕಷ್ಟು ಹಾಳಾಗಿತ್ತು. ಆದರೆ, ಶಾಸಕರು ರಸ್ತೆ ದುರಸ್ತಿಯನ್ನು ಮಾಡಿಸಿರಲಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣ ಪಂಚಾಯತ್ ರಸ್ತೆಗೆ ಪ್ಯಾಚ್ ಹಾಕಿಸಿ ದುರಸ್ತಿ ಮಾಡಿಸಿತ್ತು. ಆದರೆ, ರಸ್ತೆಗೆ ಪ್ಯಾಚ್ ಹಾಕಿಸಿ ಸಾರ್ವಜನಿಕರಿಗೆ ಓಡಾಡಲು ಅನುವು ಮಾಡಿಕೊಟ್ಟರೆಂದು ಬ್ಯಾನರ್ ಹಾಕಿಸಿಕೊಂಡಿದ್ದು ಮಾತ್ರ ಶಾಸಕ ಟಿ.ಡಿ.ರಾಜೇಗೌಡ. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್ ಸ್ಲಿಪ್ ಮತದಾರರ ಕೈಗೆ ನೀಡಬೇಕು
Advertisement
Advertisement
ಕೊಪ್ಪ ಪಟ್ಟಣದ ಮುಖ್ಯ ರಸ್ತೆ ಸಂಪೂರ್ಣ ಅಯೋಮಯವಾಗಿತ್ತು. ಟಿ.ಡಿ.ರಾಜೇಗೌಡ (TD Rajegowda) 2018ರಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ಶಾಸಕರು ರಸ್ತೆ ದುರಸ್ತಿ ಮಾಡಿಸಿದ್ದರು. ಆದರೆ, ದುರಸ್ತಿ ಮಾಡಿದ ಗುತ್ತಿಗೆದಾರನಿಗೆ ಯಾವುದೇ ಬಿಲ್ ಪಾವತಿ ಮಾಡಿರುವುದಿಲ್ಲ. 2023ರಲ್ಲಿ ಪಟ್ಟಣ ಪಂಚಾಯತ್ ಜನರ ತೆರಿಗೆ ಹಣದಲ್ಲಿ ಬಿಲ್ ಪಾವತಿ ಮಾಡಲಾಗಿದೆ. ಅದಾದ ನಂತರವೂ 2-3 ಬಾರಿ ರಸ್ತೆಗೆ ಪ್ಯಾಚ್ ಕೆಲಸ ಮಾಡಲಾಗಿದೆ. ಆದರೆ, ಶಾಸಕರ ನಿಧಿಯಿಂದ ಈವರೆಗೂ ಯಾವುದೇ ಅನುದಾನ ನೀಡಿಲ್ಲ ಎಂದು ಪಟ್ಟಣ ಪಂಚಾಯತ್ ಸದಸ್ಯರು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 2ನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧಾರ
Advertisement
Advertisement
ಪಟ್ಟಣ ಪಂಚಾಯತ್ ರಸ್ತೆ ದುರಸ್ತಿ ಮಾಡಿಸಿದ ಕೆಲಸಕ್ಕೆ ಶಾಸಕರು ಬ್ಯಾನರ್ ಹಾಕಿಸಿಕೊಳ್ಳುವುದು ಎಷ್ಟು ಸರಿ ಎಂದು ಕೊಪ್ಪ ಪಟ್ಟಣ ಪಂಚಾಯತ್ ಸದಸ್ಯರು ಶಾಸಕರನ್ನು ಪ್ರಶ್ನಿಸಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಶಾಸಕರು ಬ್ಯಾನರ್ ಹಾಕಿಸಿಕೊಂಡಿರುವುದನ್ನು ಕಂಡ ಕೊಪ್ಪ ನಿವಾಸಿಗಳು ಶಾಸಕರನ್ನು ಕಂಡು ನಗುತ್ತಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ದಲಿತಾಸ್ತ್ರ ಹೂಡಲು ಮುಂದಾಯ್ತಾ I.N.D.I.A- ಖರ್ಗೆ ಪ್ರಧಾನಿ ಅಭ್ಯರ್ಥಿ?