ಬೆಂಗಳೂರು: ಇತ್ತೀಚೆಗಷ್ಟೇ ರಾಮನಗರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಿಎಂ ಎದುರೇ ಕಿತ್ತಾಡಿಕೊಂಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿ ಸಚಿವ ಅಶ್ವಥ್ ನಾರಾಯಣ ಇಂದು ಮತ್ತೇ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರು.
Advertisement
ಇತ್ತೀಚೆಗೆ ನಡೆದಿದ್ದ ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಡಿ.ಕೆ.ಸುರೇಶ್ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ಸ್ಥಳೀಯ ಪ್ರತಿನಿಧಿಗಳು ಬರುವ ಮೊದಲೇ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ ಸಿಎಂ ನಡೆಯನ್ನು ಸಂಸದ ಡಿ.ಕೆ.ಸುರೇಶ್ ತೀವ್ರವಾಗಿ ವಿರೋಧಿಸಿದ್ದರು. ಸಚಿವ ಅಶ್ವಥ್ ನಾರಾಯಣ ಅವರು ಮಾತನಾಡುತ್ತಿದ್ದಂತೆ ಮೈಕ್ ಕಸಿದುಕೊಂಡು ಗದ್ದಲ ಸೃಷ್ಟಿಸಿದ್ದರು. ಇದೀಗ ಮತ್ತೆ ಒಂದೇ ವೇದಿಕೆ ಹಂಚಿಕೊಂಡಿರುವುದು ರಾಜಕೀಯ ರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Advertisement
Advertisement
ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ನಿರ್ಮಿಸಲಾಗುತ್ತಿರುವ ಜಿ-ಪ್ಲಸ್ ಮನೆಗಳ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಜೊತೆಗೆ ಡಿ.ಕೆ.ಸುರೇಶ್ ಕೆಲ ಸಮಯ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್, ಅಶ್ವಥ್ ನಾರಾಯಣ ನಡುವೆ ಜಟಾಪಟಿ
Advertisement
ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ ಸಿಎಂಗೆ ಬೃಹತ್ ಗುಲಾಬಿ ಹೂವಿನ ಹಾರ ಹಾಕಿ ಸನ್ಮಾನಿಸಿದರು. ಇದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ ಅವರಿಗೆ ಬೃಹತ್ ಹಾರ ಹಾಕಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ಈ ವೇಳೆ ಅಶ್ವಥ್ ನಾರಾಯಣರ ಕಡೆಯೇ ಡಿ.ಕೆ.ಸುರೇಶ್ ದಿಟ್ಟಿಸಿ ನೋಡುತ್ತಿರುವ ದೃಶ್ಯ ಕಂಡುಬಂತು. ನಂತರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೂ ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಿದ್ದಾರೆ.
1,588 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ:
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಇಲ್ಲಿನ ಲಕ್ಷ್ಮಿದೇವಿನಗರ ಬಸ್‌ನಿಲ್ದಾಣದ ಎದುರು ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ನಿರ್ಮಿಸಲಾಗುತ್ತಿರುವ 1,588 ಜಿ+4 ಮನೆಗಳ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಳಿಕ ಸಿಎಂ, ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರಗಳ ವಿತರಣೆ ಮಾಡಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಸಚಿವರಾದ ಮುನಿರತ್ನ, ವಿ.ಸೋಮಣ್ಣ, ಸಂಸದ ಡಿ.ಕೆ.ಸುರೇಶ್, ಸಿ.ಎನ್.ಅಶ್ವಥ್ ನಾರಾಯಣ ಸಹ ಭಾಗಿಯಾಗಿದ್ದರು. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು
ಶಂಕುಸ್ಥಾಪನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಇನ್ನೊಂದೇ ವರ್ಷದಲ್ಲಿ ಇಲ್ಲಿನ ಮನೆಗಳ ಕಾಮಗಾರಿ ಮುಗಿಸುತ್ತೇವೆ. ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುತ್ತಿರುವ 4 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು. ಬೊಮ್ಮಾಯಿ ಅವರು ಸಿಎಂ ಆದ್ಮೇಲೆ 40 ಸಾವಿರ ಮನೆಗಳನ್ನು ವಿತರಣೆ ಮಾಡಿದ್ದು, ಜೊತೆಗೆ ಬೆಂಗಳೂರಿನಲ್ಲಿ 52 ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಪೈಕಿ ಮುಂದಿನ ತಿಂಗಳಲ್ಲೇ 5 ಸಾವಿರ ಮನೆಗಳನ್ನು ವಿತರಣೆ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಮುನಿರತ್ನಗೆ ಹಾಸ್ಯ ಚಟಾಕಿ: ಸಚಿವ ವಿ.ಸೋಮಣ್ಣ ವೇದಿಕೆಯಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ ಹಾಗೂ ಮುನಿರತ್ನ ನಡುವೆ ಮಾತುಕತೆ ನಡೆಯುತ್ತಿತ್ತು. ಆಗ `ಲೋ ಮುನಿ ಸುಮ್ನಿರಪ್ಪ. ಸಿಎಂ ನಿನ್ ಮಾತು ಕೇಳ್ಬೇಕೋ ನನ್ ಮಾತು ಕೇಳ್ಬೇಕೋ?’ ಎಂದು ಸಚಿವ ವಿ ಸೋಮಣ್ಣ ಹಾಸ್ಯ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ
ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಚಿವ ಮುನಿರತ್ನ, ಸೋಮಣ್ಣ ಮತ್ತು ನನ್ನ ಸಂಬಂಧ ಒಬ್ಬ ಗುತ್ತಿಗೆದಾರ ಮತ್ತು ಒಬ್ಬ ಪಾಲಿಕೆ ಸದಸ್ಯನ ಸಂಬಂಧ. ಅವರು ನಾನೆಲ್ಲೇ ಇದ್ರೂ ಚೆನ್ನಾಗಿರು ಅನ್ನೋರು. ತಾಯಿ ರಾಜೇಶ್ವರಿ ಆಶೀರ್ವಾದದಿಂದ ಬೊಮ್ಮಾಯಿಯವರ ಸಂಪುಟದಲ್ಲಿ ಅವರ ಜತೆ ಸಚಿವನಾಗಿ ಕೂತಿದೀನಿ ಎಂದು ನೆನೆದಿದ್ದಾರೆ.
ವೇದಿಕೆಯಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಸೋಮಣ್ಣ ಅವರು ಹೊಸ ಮನೆ ಕಟ್ಟಿಸಿಕೊಡ್ತೀವಿ ಅಂತಿದ್ದಾರೆ. ಇಲ್ಲಿದ್ದವರನ್ನು ಖಾಲಿ ಮಾಡಿಸಿದ್ದಾರೆ. ಅವರು ಇಲ್ಲಿ ಹೇಗೋ ಬದುಕುತ್ತಿದ್ರು. ಆದರೀಗ ಅವರಿಗೆ ಎಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ? ಯಾರು ಬಾಡಿಗೆ ಕೊಡ್ತಾರೆ ಎಂದು ಪ್ರಶ್ನಿಸಿದ್ದಾರೆ.