ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ (Congress) ಸಂಸದ ರಾಕೇಶ್ ರಾಥೋಡ್ (Rakesh Rathore) ಅವರನ್ನು ಗುರುವಾರ ಬಂಧಿಸಲಾಗಿದೆ.
ಉತ್ತರ ಪ್ರದೇಶದ ಸೀತಾಪುರದ ಲೋಕಸಭಾ ಸಂಸದ ರಾಥೋಡ್‌ರನ್ನು ಬಂಧಿಸಿ ಭಾರೀ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ ಗೆದ್ದ ಬಿಜೆಪಿ; ಎಎಪಿ-ಕಾಂಗ್ರೆಸ್ ಮೈತ್ರಿಗೆ ಮುಖಭಂಗ
ಕಳೆದ ನಾಲ್ಕು ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಜ.17 ರಂದು ಪೊಲೀಸರು, ರಾಥೋಡ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ದೂರುದಾರ ಮಹಿಳೆ ಕರೆ ವಿವರಗಳು ಮತ್ತು ಕರೆ ರೆಕಾರ್ಡಿಂಗ್‌ಗಳನ್ನು ಸಹ ಪೊಲೀಸರಿಗೆ ಒದಗಿಸಿದ್ದಾರೆ. ಇದಕ್ಕೂ ಮುನ್ನ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆರೋಪಿ ರಾಥೋಡ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನೂ ಓದಿ: ಕ್ಲಾಸ್ ರೂಂನಲ್ಲೇ ವಿದ್ಯಾರ್ಥಿ ಜೊತೆ ಪ್ರೊಫೆಸರ್ ವಿವಾಹ – ವೀಡಿಯೋ ವೈರಲ್