ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case) ಅನಾಮಿಕನ ಹಿಂದೆ ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ (Sasikanth Senthil) ಇದ್ದಾರೆ ಎಂದು ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ಸ್ಫೋಟಕ ಆರೋಪ ಮಾಡಿದ್ದಾರೆ.
ಧರ್ಮಸ್ಥಳ ದೇವಸ್ಥಾನಕ್ಕೆ (Dharmasthala) ಭೇಟಿ ನೀಡಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ಷಡ್ಯಂತ್ರ ಮಾಡಿದವರ ಮೂಲಕ್ಕೆ ಹೋಗಬೇಕು. ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಿದರೆ ಸತ್ಯ ಸಂಗತಿ ಬಯಲಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ವಿಜಯೇಂದ್ರ ಕಿಡಿ
ಅಂದು ಬ್ರಿಟಿಷರು ಬಂದು ಹಿಂದೂಗಳನ್ನು ಒಡೆದು ಆಳಿದ್ದರು. ಈಗ ಕಮ್ಯೂನಿಸ್ಟರು ಹಿಂದೂ ಸಮಾಜದ ಒಳಗೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡಿ ಹಿಂದೂಗಳನ್ನು ಒಡೆಯಲು ಮುಂದಾಗುತ್ತಿದ್ದಾರೆ ಎಂದರು.
ದೇವರ ಸ್ಮರಣೆಯಿಂದ ನಮ್ಮ ದಿನ ಆರಂಭವಾಗುತ್ತದೆ. ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಈ ಷಡ್ಯಂತ್ರಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ
ಗೃಹ ಸಚಿವರು ಸದನದಲ್ಲಿ ರಾಜಕೀಯವನ್ನು ಬಿಟ್ಟು ಸರಿಯಾದ ಉತ್ತರ ನೀಡಲಿ. ಧರ್ಮದ ವಿರುದ್ಧದ ಅವಹೇಳನ, ಷಡ್ಯಂತ್ರವನ್ನು ನಾವು ಸಹಿಸುವುದಿಲ್ಲ. ಮಂಜುನಾಥ ಸ್ವಾಮಿ ಎಲ್ಲಾ ಷಡ್ಯತ್ರಗಳಿಗೆ ಉತ್ತರ ಕೊಡುತ್ತಾನೆ ಎಂದು ಹೇಳಿದರು.