ನವದೆಹಲಿ: ಪಂಜಾಬಿನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬಗ್ಗೆ ಅಸಮಾಧಾನ ಇದ್ದರೆ, ನವಜೋತ್ ಸಿಂಗ್ ಸಿಧು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಸಾಧು ಸಿಂಗ್ ಧರ್ಮಶಾಟ್ ಅವರು ಕಿಡಿಕಾರಿದ್ದಾರೆ.
ತನ್ನ ಪತ್ನಿಗೆ ಈ ಬಾರಿಯ ಲೋಕಸಭಾ ಚುನವಾಣೆಯಲ್ಲಿ ಟಿಕೆಟ್ ನೀಡದಿದ್ದಕ್ಕೆ ನವಜೋತ್ ಸಿಂಗ್ ಸಿಧು ಅವರು ಅಮರೀಂದರ್ ಸಿಂಗ್ ಅವರ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸರುವ ಸಾಧು ಸಿಂಗ್ ಸಿಧು ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement
ಸೋಮವಾರ ಪಕ್ಷದ ಸಭೆಯಲ್ಲಿ ಸಾಧು ಸಿಂಗ್, ನವಜೋತ್ ಸಿಂಗ್ ಸಿಧು ಮೊದಲು ಬಿಜೆಪಿಯಲ್ಲಿ ಇದ್ದವರು ಈಗ ಕಾಂಗ್ರೆಸ್‍ಗೆ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದಲೂ ಹೊರ ಬಿದ್ದರೆ ಎಲ್ಲಿ ಹೋಗುತ್ತಾರೆ ಎಂಬುದು ಆ ದೇವರಿಗೆ ಗೊತ್ತು. ಅವರಿಗೆ ನಮ್ಮ ಸಿಎಂ ಮೇಲೆ ಅಸಮಾಧಾನ ಇದ್ದರೆ ಅವರು ನಮ್ಮ ಸಚಿವ ಸಂಪುಟ ತೊರೆಯಬಹುದು. ಈ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
Advertisement
ಮೂಲಗಳ ಪ್ರಕಾರ ಕಾಂಗ್ರೆಸ್ ಹೈ ಕಮಾಂಡ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಸಿಧು ಅವರಿಗೆ ಈ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.
Advertisement
ಈ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮರೀಂದರ್ ಸಿಂಗ್, ನವಜೋತ್ ಸಿಂಗ್ ಸಿಧು ಜೊತೆ ಯಾವುದೇ ವೈರತ್ವವಿಲ್ಲ. ಅವರೊಬ್ಬ ಮಹತ್ವಾಕಾಂಕ್ಷೆಯ ನಾಯಕರಾದ್ರೆ ತಪ್ಪೇನು? ಜನರು ಮಹತ್ವಾಕಾಂಕ್ಷೆಯಿಂದ ಬದುಕಬೇಕು ಎಂಬುವುದು ನನ್ನ ವಾದ. ಬಾಲ್ಯದಿಂದಲೂ ಸಿಧು ಅವರನ್ನ ನಾನು ಬಲ್ಲೆ. ನಮ್ಮಿಬ್ಬರ ಮಧ್ಯೆ ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿಲ್ಲ. ಬಹುಶಃ ನನ್ನನ್ನು ಬದಿಗೆ ತಂದು ಮುಖ್ಯಮಂತ್ರಿಯಾಗುವ ಆಸೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದರು. ಇದನ್ನು ಓದಿ: ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್
ಏನಿದು ವಿವಾದ?
ಈ ಬಾರಿಯ ಲೋಕಸಭಾ ಚುನಾವಣೆ ಸಿಧು ತಮ್ಮ ಪತ್ನಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ಮುಖಂಡರ ಮುಂದೆ ಮನವಿ ಮಾಡಿಕೊಂಡಿದ್ದರು. ಆದರೆ ಪಕ್ಷ ನವಜೋತ್ ಕೌರ್ ಅವರಿಗೆ ಟಿಕೆಟ್ ನೀಡಿರಲಿಲ್ಲ. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನವಜೋತ್ ಕೌರ ಬಹಿರಂಗವಾಗಿಯೇ ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇತ್ತ ಸಿಧು ಸಹ ಪತ್ನಿಯ ಹೇಳಿಕೆಯನ್ನು ಸಮರ್ಥಿಸಿಕೊಂಡು ಸಿಎಂಗೆ ಪರೋಕ್ಷವಾಗಿ ಟಾಂಗ್ ನೀಡಿದ್ದರು. ಅಂದಿನಿಂದ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದೆ.