ಲಕ್ನೋ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಎಂದು ಐಎಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಬುಲಂದರ್ ಶಹರ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ಯಾವುದೇ ಸಾಧ್ಯತೆಗಳು ಇಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ನಾವು ನಾಮನಿರ್ದೇಶನ ಮಾಡುತ್ತೇವೆ. ಒಂದು ವೇಳೆ ಕಾಂಗ್ರೆಸ್ ಗೆಲುವು ಸಾಧಿಸಿದರೆ ಅದು ತನ್ನ ಸ್ವಂತ ಸಾಮರ್ಥ್ಯದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.
Advertisement
Advertisement
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಇತ್ತೀಚೆಗೆ ಭರವಸೆ ನೀಡಿತ್ತು. ಮಹಿಳೆಯರನ್ನು ಅಧಿಕಾರದಲ್ಲಿ ಪೂರ್ಣ ಪ್ರಮಾಣದ ಪಾಲುದಾರರನ್ನಾಗಿ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ಇದನ್ನೂ ಓದಿ: ತಮಿಳು ಚಿತ್ರತಂಡದ ನಂತರ ಮತ್ತೆ ಸಕ್ಕರೆ ನಾಡಿನಲ್ಲಿ ತೆಲುಗು ಸಿನಿಮಾದವರಿಂದ ಅವಾಂತರ
Advertisement
Advertisement
ಈ ಹಿಂದಿನ ಅನುಭವದಿಂದ ಪಾಠ ಕಲಿತಿರುವುದರಿಂದ ಯಾವುದೇ ಪ್ರಮುಖ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಳೆದ ತಿಂಗಳು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡುವುದಕ್ಕೂ ಮುನ್ನ ದೇವರ ಪಾದ ಮುಟ್ಟಿ ನಮಸ್ಕರಿಸಿದ!- ವೀಡಿಯೋ ವೈರಲ್