– 222 ಶಾಸಕರಿಂದ ಮತದಾನ ಪೂರ್ಣ
ಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್ ಆಕ್ಷೇಪವನ್ನ ಚುನಾವಣಾಧಿಕಾರಿಗಳು ತಿಸ್ಕರಿಸಿದ್ದಾರೆ.
ಮತಗಟ್ಟೆಯೊಳಗೆ ಯಾವುದೇ ನಿಯಮ ಉಲ್ಲಂಘನೆ ಆಗಲ್ಲ ಎಂದು ಹೇಳಿ ಚುನಾವಣಾಧಿಕಾರಿಗಳು ಕಾಂಗ್ರೆಸ್ (Congress) ಆಕ್ಷೇಪವನ್ನ ತಿರಸ್ಕರಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ಗೆ ಶಾಕ್ – ಅಡ್ಡ ಮತದಾನ ಮಾಡಿದ್ರಾ ಜಿ.ಟಿ ದೇವೇಗೌಡ?

ಕಾಂಗ್ರೆಸ್ ಆಕ್ಷೇಪ ಎತ್ತಿದ್ದೇಕೆ?
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಬಹಿರಂಗವಾಗಿ ಪತ್ರ ಹಾಕುತ್ತೇನೆ ಎಂದಿದ್ದರು. ಇದನ್ನ ಕಾಂಗ್ರೆಸ್ ಪ್ರಶ್ನೆ ಮಾಡಿತ್ತು. ಯತ್ನಾಳ್ ರೂಲ್ 39 ಉಲ್ಲಂಘನೆ ಮಾಡಿದ್ದಾರೆ. ಅವರ ಮತವನ್ನ ಅಸಿಂಧುಗೊಳಿಸುವಂತೆ ಒತ್ತಾಯಿಸಿತ್ತು. ಆದ್ರೆ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ ಎಂದಿರುವ ಚುನಾವಣಾಧಿಕಾರಿಗಳು ಕಾಂಗ್ರೆಸ್ ಆಕ್ಷೇಪವನ್ನ ತಿರಸ್ಕರಿಸಿದ್ದಾರೆ.
222 ಶಾಸಕರಿಂದ ಮತದಾನ ಪೂರ್ಣ
ಇನ್ನೂ ರಾಜ್ಯದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನ ಪೂರ್ಣಗೊಂಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಬಸವರಾಜ್ ರಾಯರೆಡ್ಡಿ ಕೊನೆ ಮತದಾನ ಮಾಡುವ ಮೂಲಕ ಮತದಾನ ಪೂರ್ಣಗೊಂಡಿದೆ. ಸಂಜೆ 5ರ ಬಳಿಕ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಅನುಮಾನ ಏನಿಲ್ಲ, ನಮ್ಮಪ್ಪ ಜೆಡಿಎಸ್‌ಗೆ ಮತ ಹಾಕಿದ್ದಾರೆ – ಪುತ್ರ ಹರೀಶ್ ಗೌಡ ವಿಶ್ವಾಸ
