Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

Belgaum

ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

Public TV
Last updated: December 20, 2021 6:33 pm
Public TV
Share
3 Min Read
SIDDRAMAIHA 3
SHARE

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಬಲವಾಗಿ ಖಂಡಿಸಲು ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಕಾಯ್ದೆ ಮಂಡನೆಗೆ ಮುಂದಾದರೆ ಅದರ ಪೀಠಿಕೆಗೆ ನಮ್ಮ ವಿರೋಧ ಇದೆ. ಚರ್ಚೆಯಲ್ಲಿ ಭಾಗವಹಿಸುವುದು ಬೇರೆ ಮಾತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

Belagavi Suvarna Soudha VidhanaSabhe

 

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಸಚಿವರಾಗಿರುವ ಬೈರತಿ ಬಸವರಾಜ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಆದೇಶ ನೀಡಿರುವ ಕುರಿತು ಶುಕ್ರವಾರ ನಾನು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಈ ಪ್ರಕರಣದಲ್ಲಿ ಇಬ್ಬರು ರಾಜಕಾರಣಿಗಳು ಆರೋಪಿ ಸ್ಥಾನದಲ್ಲಿದ್ದಾರೆ. ಒಬ್ಬರು ಬೈರತಿ ಬಸವರಾಜ್, ಇನ್ನೊಬ್ಬರು ವಿಧಾನ ಪರಿಷತ್ ಸದಸ್ಯ ಶಂಕರ್. ಇವರ ವಿರುದ್ಧ ನಕಲಿ ಸಹಿ, ಆಸ್ತಿ ಕಬಳಿಕೆ, ಕ್ರಿಮಿನಲ್ ಚಟುವಟಿಕೆ ಮುಂತಾದ ಗಂಭೀರ ಪ್ರಕರಣವಿದೆ. ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

ಈ ಹಿಂದೆ ಡಿವೈಎಸ್‍ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾಗ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ತಪ್ಪಿಲ್ಲದಿದ್ದರೂ ಕೆ.ಜೆ ಜಾರ್ಜ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರು ನ್ಯಾಯಾಲಯದ ಆದೇಶ ಇದ್ದರೂ ಭಂಡತನದಿಂದ ಇನ್ನೂ ರಾಜೀನಾಮೆ ನೀಡಿಲ್ಲ. ಈ ನಾಚಿಕೆಗೆಟ್ಟ ಸರ್ಕಾರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕಿತ್ತು. ಅದನ್ನೂ ಮಾಡಿಲ್ಲ. ಈ ಪ್ರಕರಣವನ್ನು ತಾತ್ವಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂದು ತೀರ್ಮಾನ ಮಾಡಿದ್ದೆವು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

ಆದರೆ ನಮ್ಮ ನಿಲುವಳಿ ಸೂಚನೆಯನ್ನು ತಿರಸ್ಕಾರ ಮಾಡಿದ್ದಾರೆ. ನಾವು ಚರ್ಚೆಗೆ ಅವಕಾಶ ನೀಡಿಲ್ಲ, ಮತ್ತು ಬೈರತಿ ಬಸವರಾಜ್ ರಾಜೀನಾಮೆ ಪಡೆಯಲಿಲ್ಲ ಎಂಬ ಕಾರಣಕ್ಕೆ ಶುಕ್ರವಾರ ಧರಣಿ ಪ್ರಾರಂಭ ಮಾಡಿದ್ದೆವು. ರಾಜ್ಯದಲ್ಲಿ ಸಾಕಷ್ಟು ಗಂಭೀರ ಸಮಸ್ಯೆಗಳಿವೆ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ದ್ವಂಸ ಮಾಡಲಾಗಿದೆ, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಳವಾಗಿದೆ, ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿದೆ, ಉತ್ತರ ಕರ್ನಾಟಕದ ಮಹದಾಯಿ, ಕೃಷ್ಣ ನದಿನೀರಿನ ವಿಚಾರ, ಎತ್ತಿನಹೊಳೆ ಯೋಜನೆ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಬಿಟ್ ಕಾಯಿನ್, 40% ಕಮಿಷನ್ ವಿಚಾರ ಮುಂತಾದ ಗಂಭೀರ ವಿಷಯಗಳ ಚರ್ಚೆ ನಡೆಸುವ ಉದ್ದೇಶದಿಂದ ಧರಣಿ ಕೈಬಿಟ್ಟಿದ್ದೇವೆ. ಇದನ್ನೂ ಓದಿ: ಮತಾಂತರ ಮಸೂದೆ: ದುಸ್ಸಾಹಸಕ್ಕೆ ಕೈ ಹಾಕಿ ಪಾಸ್ ಮಾಡಿದ್ರೆ 2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ – ಸಿದ್ದು

ಈ ಎಲ್ಲಾ ವಿಷಯಗಳ ಚರ್ಚೆಗೆ ಸಮಯಾವಕಾಶದ ಕೊರತೆ ಇರುವುದರಿಂದ ಸದನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಣೆ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದೆ, ಈ ಮನವಿಯನ್ನು ಅವರ ಒಪ್ಪದ ಕಾರಣಕ್ಕೆ, ಎಂಇಎಸ್ ನವರ ಪುಂಡಾಟಿಕೆ, ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಕಾರಣಕ್ಕೆ ನಾವಿಂದು ಸಭಾತ್ಯಾಗ ಮಾಡಿದ್ದೇವೆ. ಅಧಿವೇಶನದ ಹೊರಗೆ ಈ ಎಲ್ಲಾ ವಿಚಾರಗಳ ಬಗ್ಗೆ ಪ್ರತಿಭಟನೆ ಮುಂದುವರೆಸುತ್ತೇವೆ ಮತ್ತು ಜನತಾ ನ್ಯಾಯಾಲಯಕ್ಕೆ ಇವನ್ನು ತೆಗೆದುಕೊಂಡು ಹೋಗುತ್ತೇವೆ. ಕಳಂಕ ಹೊತ್ತಿರುವ ವ್ಯಕ್ತಿಯನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ಅವರನ್ನು ಉಳಿಸಿಕೊಂಡರೆ ಸರ್ಕಾರ ಮುಂದುವರೆಯಲು ಯಾವುದೇ ನೈತಿಕ ಹಕ್ಕುಗಳು ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಪುಂಡರು ನಡೆಸಿರುವ ದುಷ್ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂಬ ಸಿ.ಟಿ ರವಿ ಹೇಳಿಕೆ ಶುದ್ಧ ಸುಳ್ಳು ಮತ್ತು ಇದೊಂದು ರಾಜಕೀಯ ಪ್ರೇರಿತ ಹೇಳಿಕೆ. ಅವರು ಇದೇ ರೀತಿ ಕ್ಷುಲ್ಲಕ ಹೇಳಿಕೆ ನೀಡಿದರೆ ನಾವು ಕೂಡ ಜ್ವಲಂತ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯವರೇ ಗಲಾಟೆ ಎಬ್ಬಿಸುತ್ತಿದ್ದಾರೆಂದು ಆರೋಪ ಮಾಡಬೇಕಾಗುತ್ತದೆ. ಸಿ.ಟಿ ರವಿ ಅವರಿಗೆ ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳುವುದು ಒಳಿತು. ಆರೋಪ ಮಾಡಲು ನಮಗೂ ಬರುತ್ತದೆ ಎಂದು ತಿರುಗೇಟು ನೀಡಿದರು.

TAGGED:Anti-conversion Billcongresssiddaramaiahಕಾಂಗ್ರೆಸ್ಬಿಜೆಪಿಮತಾಂತರ ಮಸೂದೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
3 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
3 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
3 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
4 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?