– ಶಿಕಾರಿಪುರದಿಂದಲೇ ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದು
ಚಿತ್ರದುರ್ಗ: ಬಿಜೆಪಿ ನಡೆಸಿದ `ಬಳ್ಳಾರಿ ಚಲೋ’ ಪಾದಯಾತ್ರೆಯ ಪ್ರೇರಣೆಯಿಂದಲೇ ಇಂದು ಕಾಂಗ್ರೆಸ್ (Congress) ಪಕ್ಷ ಪಾದಯಾತ್ರೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವ್ಯಂಗ್ಯವಾಡಿದರು.
ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ `ಹಿಂದೂ ಮಹಾಗಣಪತಿ’ಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ನನ್ನದೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿಸಿದ ಕೀರ್ತಿ ಶಿಕಾರಿಪುರಕ್ಕೆ ಸಲ್ಲುತ್ತದೆ. ಕೆಪಿಸಿಸಿ ಅಧ್ಯಕ್ಷರಿಗೆ ಒಳ್ಳೆಯದಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪತ್ನಿ ಜೊತೆ ಗಲಾಟೆ – ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಹಾರಿ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ ರೋಗಿ
ಹರಿಪ್ರಸಾದ್ಗೆ ವಿಜಯೇಂದ್ರ ತಿರುಗೇಟು:
ತಮ್ಮ ರಾಜಕೀಯ ಅನುಭವದ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಾಡಿರುವ ಟೀಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ನಾನು ಎಲ್ಕೆಜಿ ವಿದ್ಯಾರ್ಥಿ ಇರಬಹುದು, ಮೊದಲ ಸಲ ಶಾಸಕನಾಗಿರಬಹುದು. ಆದರೆ ಹರಿಪ್ರಸಾದ್ ಅವರು ಪಿಹೆಚ್ಡಿ ಮಾಡಿದ್ದರೂ ಇದುವರೆಗೂ ನೇರ ಚುನಾವಣೆಯಲ್ಲಿ ಗೆದ್ದಿಲ್ಲ ಎಂದು ತಿವಿದರು. ಇದನ್ನೂ ಓದಿ: ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್
ಬ್ಯಾನರ್ ಹರಿದು ಹಾಕುವ ಕೀಳು ರಾಜಕಾರಣದ ಅಗತ್ಯ ನಮಗಿಲ್ಲ:
ಕೆಲವರು ಬ್ಯಾನರ್ ಹರಿದು ಹಾಕಿಸಿಕೊಂಡೇ ಪ್ರಚಾರ ಪಡೆಯುತ್ತಿದ್ದಾರೆ. ಅಂತಹ 420 ರಾಜಕಾರಣ ನಮಗೆ ಬೇಕಾಗಿಲ್ಲ ಎಂದು ಕಟುವಾಗಿ ಟೀಕಿಸಿದರು. ಇದನ್ನೂ ಓದಿ: ಗಗನದಲ್ಲೇ ಪೈಲಟ್ಗಳ ರಕ್ತಸಿಕ್ತ ಕಾದಾಟ; ಇಸ್ರೇಲ್ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್- ತಪ್ಪಿತು ದುರಂತ
ಆರ್ಟಿಜಿಎಸ್ ಮೂಲಕ ಹಣ ಪಡೆದಿರುವ ಕುರಿತ ಹರಿಪ್ರಸಾದ್ ಅವರ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, ಹರಿಪ್ರಸಾದ್ ಅವರು ತಮ್ಮ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಈ ಎಲ್ಲ ಆರೋಪಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗಿವೆ. ನಾನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹನೂರು ತಾಲೂಕಿನಲ್ಲಿ ಮಳೆಯ ಅಬ್ಬರ; 50ಕ್ಕೂ ಹೆಚ್ಚು ಮನೆ ಜಲಾವೃತ
ಹರಿಪ್ರಸಾದ್ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಕಾರ್ಯಕ್ರಮಗಳಿಗೂ ಅವರನ್ನು ಕರೆಯುತ್ತಿಲ್ಲ. ಹೀಗಾಗಿ ಪಾದಯಾತ್ರೆ ಮಾಡಿ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಾಯ
ಮಠಾಧೀಶರ ಕುರಿತ ಸರ್ಕಾರದ ಹೇಳಿಕೆಗೆ ಆಕ್ಷೇಪ:
ಮಠಾಧೀಶರು ಸರ್ಕಾರದ ಯೋಜನೆಗಳ ರಾಯಭಾರಿಗಳಾಗಬೇಕು ಎಂಬ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬರಗಾಲವಿದ್ದರೂ ರೈತರಿಗೆ ಸೂಕ್ತ ಪರಿಹಾರ ನೀಡದ ಕಾರಣಕ್ಕೆ ಇಂದು ಜನರು ಸರ್ಕಾರಕ್ಕೆ ಥೂ, ಛೀ ಎಂದು ಧಿಕ್ಕಾರ ಕೂಗುತ್ತಿದ್ದಾರೆ. ಮಠಾಧೀಶರು ನನ್ನ ಸೇವೆ ಮಾಡಬೇಕೆಂದು ಹೇಳುತ್ತಿದ್ದಾರೆ. ಆದರೆ ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹೆಚ್.ಡಿ.ಕುಮಾರಸ್ವಾಮಿ ಹಫ್ತಾ ವಸೂಲಿ ಗಿರಾಕಿ: ಸಚಿವ ಬಾಲಕೃಷ್ಣ ವಾಗ್ದಾಳಿ

