ಚಾಮರಾಜನಗರ: ಕಾಂಗ್ರೆಸ್ ಪಕ್ಷಕ್ಕೆ ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ನಂಬಿಕೆ ಇಲ್ಲ. ಹಾಗೂ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸವಿಲ್ಲ. ಅದಕ್ಕೆ ಬೆಳಗಾವಿಯಲ್ಲಿ ಅನುಮತಿ ಕೇಳದೇ ಸಮಾವೇಶ ಮಾಡುತ್ತಿದೆ ಎಂದು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಇಂದು ಮಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಹಿಂದೂಪರ ಸಂಘಟನೆಯ ಕಾರ್ಯಕರ್ತರ ಹತ್ಯೆ ಖಂಡಿಸಿ ಬೈಕ್ ರ‍್ಯಾಲಿ ಹಾಗೂ ಪ್ರತಿಭಟನೆ ಮಾಡಲು ಪೊಲೀಸರಿಗೆ ಅನುಮತಿ ಕೇಳಿದ ಸಂದರ್ಭದಲ್ಲಿ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಬೆಳಗಾವಿಯಲ್ಲಿ ಅನುಮತಿಯನ್ನು ಪಡೆಯದೇ ರ‍್ಯಾಲಿ ಹಾಗೂ ಸಮಾವೇಶ ಮಾಡಲು ಮುಂದಾಗಿದೆ. ಇದರಲ್ಲೇ ತಿಳಿಯುತ್ತದೆ ಅವರಿಗೆ ಪ್ರಜಾಪ್ರಭುತ್ವದ ಮೇಲೆ ಗೌರವ ಇಲ್ಲ ಎಂದು ಅಂತ ಹೇಳಿದ್ರು.
Advertisement
ಕಾಂಗ್ರೆಸ್ ಪಕ್ಷದವರು ಕಾನೂನು ಮೀರಿ ವರ್ತನೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ಸಂಸ್ಕೃತಿ ಕಾಂಗ್ರೆಸ್ ಗೆ ಇಲ್ಲ. ಇವರಿಗೆ ಸಮಾಜದ ಸ್ವಾಸ್ಥ್ಯ ಯಾವುದು ಎಂದು ತಿಳಿದಿಲ್ಲ ಅಂತ ಕಿಡಿ ಕಾರಿದರು.
Advertisement
ಕಾಂಗ್ರೆಸ್ ಸರ್ಕಾರ ಬೆಳಗಾವಿಯಲ್ಲಿ ನಡೆಸುತ್ತಿರುವ ಸಮಾವೇಶದ ಬಗ್ಗೆ ಬಿಜೆಪಿ ಕಾನೂನು ಹಾಗೂ ಸಾಮಾಜಿಕ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.