ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಒಂದೇ ಆಡಳಿತ ಕೊಡಬೇಕು. ಅವರು ಎಲ್ಲಾ ಸಮುದಾಯವನ್ನೂ ಸಮನಾಗಿ ನೋಡಿಕೊಳ್ಳಬೇಕು. ಆದರೆ ರಾಜಕೀಯ ಪ್ರೇರಿತವಾಗಿ ಮುಸ್ಲಿಂ ಸಮುದಾಯಕ್ಕೆ (Muslim Community) ತುಷ್ಟೀಕರಣ ಮಾಡುತ್ತಾರೆ. ಕಾಂಗ್ರೆಸ್ (Congress) ಪಕ್ಷದವರು ಕೋಮುವಾದಿಗಳು ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ (CN Ashwath Narayan) ಹೇಳಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ 10,000 ಕೋಟಿ ರೂ. ಖರ್ಚು ಮಾಡಲು ಸಿದ್ಧ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಸಿಎಂ ಸಮಾನವಾಗಿ ಎಲ್ಲರನ್ನೂ ನೋಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಕೋಮುವಾದಿಗಳಿಂದ ರಾಜ್ಯದಲ್ಲಿ ಅಸ್ವಾಸ್ತ್ಯ ಇದೆ. ಬರಗಾಲ, ರೈತರ ಆತ್ಮಹತ್ಯೆಗೆ ಪರಿಹಾರ ಕೊಡಲು ಆಗುತ್ತಿಲ್ಲ. ಆದರೆ ಈ ರೀತಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರಿಗೂ ಕಿವಿಗೆ ಹೂ ಇಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ: ಆರ್.ಅಶೋಕ್
Advertisement
Advertisement
ಇನ್ನೂ ಆರ್ ಅಶೋಕ್‌ಗಿಂತ (R Ashok) ಬಸನಗೌಡ ಪಾಟೀಲ್‌ಗೆ (Basanagouda Patil Yatnal) ಶಾಸಕರು ಸಾಥ್ ವಿಚಾರವಾಗಿ ಮಾತನಾಡಿದ ಅವರು, ಸಮಸ್ಯೆ ಹೇಳಿಕೊಂಡರೆ ಏನು ತಪ್ಪು? ಅಶೋಕ್‌ಗಿಂತ ಬಸನಗೌಡ ಪಾಟೀಲ್‌ಗೆ ಶಾಸಕರ ಬೆಂಬಲ ಹೆಚ್ಚಿದೆ. ಆದರೆ ಯತ್ನಾಳ್ ಯತ್ನಾಳನೇ, ಆರ್ ಅಶೋಕ್ ಆರ್ ಅಶೋಕನೆ ಎಂದು ಹೇಳಿದರು. ಇದನ್ನೂ ಓದಿ: ಕನ್ನಡಿಗರಿಗೆ ಫ್ರಂಟ್ ಡೆಸ್ಕ್ ಉದ್ಯೋಗ ಕೊಡಿ: ಜಗ್ಗೇಶ್ ಒತ್ತಾಯ
Advertisement