ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಓರ್ವ `ವಿಷಕನ್ಯೆ’ಯಿಂದ ಕಾಂಗ್ರೆಸ್ ಪಕ್ಷ ಹಾಳಾಗ್ತಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ವಿರುದ್ಧವೂ ಗುಡುಗಿದರು.
Advertisement
Advertisement
ಬೆಳಗಾವಿ ಗ್ರಾಮೀಣ ಕ್ಷೇತ್ರದ ಓರ್ವ `ವಿಷಕನ್ಯೆ’ಯಿಂದ ಇವತ್ತು ಕಾಂಗ್ರೆಸ್ ಪಕ್ಷ ಹಾಳಾಗ್ತಿದೆ. ಒಂದು ವೇಳೆ ರಾಜ್ಯದಲ್ಲಿ ಜಾತಿ ಸಂಘರ್ಷ ಆದರೂ ಅದಕ್ಕೆ ಡಿಕೆ ಶಿವಕುಮಾರ್ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿಯೇ ಕಾರಣ ಎಂದು ನೇರವಾಗಿಯೇ ಆರೋಪಿಸಿದ್ದಾರೆ. ಇದನ್ನೂ ಓದಿ: ನನ್ನ ಮೇಲೆ ಷಡ್ಯಂತ್ರ, ಷಂಡರಂತೆ ರಾಜಕೀಯ ಮಾಡಿದ್ದಾನೆ – ಮಹಾನಾಯಕನ ವಿರುದ್ಧ ಜಾರಕಿಹೊಳಿ ಕಿಡಿ
Advertisement
Advertisement
ನನ್ನ ವಿರುದ್ಧ 40 ಕೋಟಿ ರೂ. ನೀಡಿ ಸಿಡಿ ಷಡ್ಯಂತ್ರ ಮಾಡಿದ್ದು ಡಿಕೆಶಿನೇ. ನನ್ನ ಸಿಡಿ ಮಾತ್ರವಲ್ಲದೇ ನೂರಾರು ಸಿಡಿ ಮಾಡಿದ್ದಾರೆ. ಸಾಕಷ್ಟು ಅಧಿಕಾರಿಗಳು ಅವರ ಜಾಲದಲ್ಲಿ ಸಿಲುಕಿದ್ದಾರೆ. ಇದು ಗಂಭೀರವಾದ ವಿಷಯ. ರಾಜ್ಯ ಸರ್ಕಾರ ತಕ್ಷಣ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಡಿಕೆ ಶಿವಕುಮಾರ್ ರಾಜಕಾರಣದಲ್ಲಿ ಇರಲು ನಾಲಾಯಕ್. ಎಲ್ಲಾ ಆಯಾಮದಲ್ಲೂ ತನಿಖೆ ಆಗಬೇಕು. ಜೊತೆಗೆ ನನ್ನ ವಿರುದ್ಧ ಸಿಡಿಗೆ ಸಹಕರಿಸಿದ ಯುವತಿಯನ್ನೂ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಿಡಿ ಬಿಡುಗಡೆ ಮಾಡಿದ ಬಳಿಕವೂ ರಾಜಿಯಾಗಲು ಮುಂದಾಗಿದ್ದರು. ಆದರೆ ನಾನು ಒಪ್ಪಲಿಲ್ಲ. ಈಗ ಡಿಕೆ ಶಿವಕುಮಾರ್ ತಮ್ಮ ಗರ್ಲ್ಫ್ರೆಂಡ್ ಜೊತೆಗೆ `ನನ್ನ ಹತ್ತಿರ ದುಬೈನಲ್ಲಿ, ಲಂಡನ್ನಲ್ಲಿ ಮನೆಯಿದೆ. ಸಾವಿರಾರು ಕೋಟಿ ಹಣ ಇದೆ ಎಂದು ಹೇಳಿಕೊಂಡಿರುವ ಆಡಿಯೋ ನನ್ನ ಬಳಿಯಿದೆ. ಇದೆಲ್ಲವನ್ನೂ ಸಿಬಿಐ ತನಿಖೆಗೆ ಒಪ್ಪಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಖಿಲ್, ಅನಿತಾ ಕುಮಾರಸ್ವಾಮಿ ಗೆಲ್ತಾರೆ- ಭವಾನಿ ಪರ ರೇವಣ್ಣ ಬ್ಯಾಟಿಂಗ್
ಕಳೆದ 15 ವರ್ಷದಿಂದ ನಾನು ಇಬ್ಬರು ಸ್ನೇಹಿತರು. 1987 ರಲ್ಲಿ ಸ್ಪರ್ಧಿಸಿದಾಗ ಡಿಕೆಶಿಯೂ ಸೋತರೂ ನಾನು ಸೋತಿದ್ದೆ. 1985 ರಲ್ಲಿ ಡಿಕೆಶಿ ಹರಕು ಚಪ್ಪಲಿ ಹಾಕಿಕೊಂಡಿದ್ದ, ಈಗ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾನೆ. ನಾನು ಬಡ ಕುಟುಂಬದಿಂದ ಬಂದಿದ್ದರೂ ರ್ಯಾಡೋ ವಾಚ್ ಧರಿಸುತ್ತಿದ್ದೆ, ಇವತ್ತಿಗೂ ಅದೇ ಧರಿಸುತ್ತಿದ್ದೇನೆ. ಡಿಕೆಶಿ ಆಸ್ಪತ್ರೆಯಲ್ಲಿದ್ದಾಗ ನಾನು ನೋಡಲು ಹೋಗಿದ್ದೆ, ಆಗ ಡಿಕೆಶಿ ಪತ್ನಿ ಪಾರ್ಟಿ ಬಿಡಬೇಡ ಅಣ್ಣ ಎಂದು ಮನವಿ ಮಾಡಿದ್ದರು. ಅವಾಗ ನಾನು ಇಲ್ಲ ತಂಗಿ ನಿಮ್ಮ ಯಜಮಾನ್ರು ಸರಿಯಿಲ್ಲ ಎಂದಿದ್ದೆ. ಡಿಕೆಶಿ ಅಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ಕೊಡಬೇಡ ಎಂದಿದ್ದರು. ನಾನೇ ಮುಂದೆ ನಿಂತು ಒತ್ತಾಯ ಮಾಡಿ ಟಿಕೆಟ್ ಕೊಡಿಸಿದ್ದೆ. ಈಗ ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಡಿಕೆಶಿ ಬ್ಲ್ಯಾಕ್ ಆಂಡ್ ವೈಟ್ ದಂಧೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನನ್ನ ವಿರುದ್ಧ ಅಶ್ಲೀಲ ವೀಡಿಯೋನಲ್ಲಿ ಮಾಡಿದ್ದ ಯುವತಿ ಬೆಂಗಳೂರಿನ ಕಾಂಗ್ರೆಸ್ ಮಹಿಳಾ ಪದಾಧಿಕಾರಿಯ ಮನೆಯಲ್ಲಿ ಇದ್ದಾಳೆ. ಮುಂದಿನ ಚುನಾವಣೆ ನನ್ನ ಕೊನೆ ಚುನಾವಣೆಯಾಗಲಿದ್ದು, 5 ವರ್ಷದಲ್ಲಿ ಡಿಕೆಶಿ ಅವರನ್ನ ಮುಗಿಸುತ್ತೇನೆ, ಅರೆಸ್ಟ್ ಮಾಡಿಸುತ್ತೇನೆ ಎಂದು ಶಪಥ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸುತ್ತಿಲ್ಲ. ಎಲ್ಲಾ ದಾಖಲೆಗಳು ನನ್ನ ಜೊತೆ ಇದೆ. ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ. ಎಲ್ಲಾ ದಾಖಲೆಗಳನ್ನು ನಾನು ಸಿಬಿಐಗೆ ನೀಡುತ್ತೇನೆ ಎಂದು ಈ ವೇಳೆ ತಿಳಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k