ಬೆಂಗಳೂರು: ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (BY Election) ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ (Congress) ಪಕ್ಷ ಸಜ್ಜಾಗಿದೆ. ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಉಪಚುನಾವಣೆ ಘೋಷಣೆಯಾಗಿದ್ದು, ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಹೇಳಿದರು. ಇದನ್ನೂ ಓದಿ: ಅ.20ಕ್ಕೆ ಬಾಗಲಕೋಟೆಯಲ್ಲಿ ರಾಯಣ್ಣ ಚನ್ನಮ್ಮ ಬ್ರಿಗೇಡ್ ಸಭೆ: ಕೆಎಸ್ ಈಶ್ವರಪ್ಪ
Advertisement
Advertisement
ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಮಾತನಾಡಿ, ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ. ಆಗ ನಾನು ಅದನ್ನು ನಂಬುತ್ತೇನೆ ಎಂದರು. ಇದನ್ನೂ ಓದಿ: ಇಸ್ರೇಲ್ ಜೊತೆ ಮೋದಿಗೆ ಉತ್ತಮ ಸಂಬಂಧವಿದೆ – ಕಾಂಗ್ರೆಸ್ನಿಂದ ಇವಿಎಂ-ಪೇಜರ್ ಅನುಮಾನ
Advertisement