ನವದೆಹಲಿ: ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಲು ಇಚ್ಛಿಸುವವರು ಇನ್ಮುಂದೆ ಮದ್ಯ, ಮಾದಕ ದ್ರವ್ಯ ಸೇವನೆ ಮಾಡಲ್ಲ ಎಂದು ಘೋಷಣೆ ಮಾಡಿ ಕೊಳ್ಳಬೇಕು. ಪಕ್ಷದ ಕಾರ್ಯಕ್ರಮ, ನೀತಿಗಳನ್ನು ಸಾರ್ವಜನಿಕವಾಗಿ ಟೀಕಿಸುವುದಿಲ್ಲ ಎಂಬ ವಾಗ್ದಾನ ಮಾಡಬೇಕಾಗಿದೆ.
ಕಾಂಗ್ರೆಸ್ ನ.1ರಿಂದ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಿದ್ದು, ಅದರ ಫಾರಂನಲ್ಲಿ ಹೊಸದಾಗಿ ಪಕ್ಷದ ಸದಸ್ಯತ್ವ ಬಯಸುವವರು ದೇಶದ ಕಾನೂನು ಮೀರಿ ಯಾವುದೇ ಸ್ವತ್ತು ಹೊಂದಿಲ್ಲ ಮತ್ತು ಪಕ್ಷ ಸೂಚಿಸಿದ ಯಾವುದೇ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಳ್ಳುವುದಾಗಿ ಒಪ್ಪಿಕೊಳ್ಳಬೇಕು ಎಂಬ ಅಂಶಗಳಿವೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ
Advertisement
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಅಧ್ಯಕ್ಷ ಮಧುಸೂಧನ್ ಮಿಸ್ತ್ರಿ ಮುಂದಿನ ವರ್ಷ ಆ.21 ರಿಂದ ಸೆ. 20ರವರೆಗೆ ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುಂಚಿತವಾಗಿ ನ.1 ರಿಂದ ಮಾ.31ರವರೆಗೆ ಸದಸ್ಯತ್ವ ಅಭಿಯಾನವನ್ನು ಆರಂಭಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಸದಸ್ಯರೆಲ್ಲರೂ ಪಕ್ಷದ ಸಂವಿಧಾನವನ್ನು ಒಪ್ಪಿಕೊಳ್ಳಲೇಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್
Advertisement
Advertisement
ಷರತ್ತುಗಳೇನು?
* ನಾನು ಪ್ರಮಾಣೀಕರಿಸಿದ ಖಾದಿ ಬಟ್ಟೆಯನ್ನು ತೊಡುವ ಅಭ್ಯಾಸ ಇರುವವನು.
* ನನಗೆ ಮದ್ಯಪಾನ ಮತ್ತು ಮಾದಕ ದ್ರವ್ಯ ಸೇವನೆಯ ಚಟಗಳಿಲ್ಲ.
* ನಾನು ಸಾಮಾಜಿಕ ಅಸಮಾನತೆಯನ್ನೂ ನಂಬಲ್ಲ ಮತ್ತು ಪಾಲಿಸಲ್ಲ.
* ಜಾತಿ, ಧರ್ಮ ಎಂಬ ಬೇಧವಿಲ್ಲದೆ ಸಾಮಾಜಿಕ ಏಕತೆಯಲ್ಲಿ ನಂಬಿಕೆ ಇದೆ.
* ಕಾನೂನು ಮೀರಿ ನಾನು ಹೆಚ್ಚಿನ ಆಸ್ತಿಯನ್ನು ಹೊಂದಿಲ್ಲ.
* ಕಾರ್ಯಕಾರಿ ಸಮಿತಿ ನಿರ್ಧರಿಸಿದ ಯಾವುದೇ ಕೆಲಸಕ್ಕೂ ನಾನು ಸಿದ್ಧ.