– ರಾಜಕೀಯ ಸರ್ಕಾರ ರಚನೆಗಾಗಿ ಅಲ್ಲ, ರಾಷ್ಟ್ರ ನಿರ್ಮಾಣಕ್ಕೆ
ನವದೆಹಲಿ: ಚುನಾವಣಾ (loksabha Elections 2024) ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ.
Advertisement
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಧಾರ್ಮಿಕ ನೆಲೆಯಲ್ಲಿ ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಸಾಮಾಜಿಕ ಸಾಮರಸ್ಯವನ್ನು ಕದಡಲು ಬಯಸುತ್ತದೆ. ಅವರು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್ತದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು – ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್
Advertisement
ಕಾಂಗ್ರೆಸ್ ಭಯದ ಮನಸ್ಥಿತಿ ಸೃಷ್ಟಿಸಲು ಬಯಸುತ್ತದೆ. ಅವರು ಚುನಾವಣೆಗಾಗಿ ಹಿಂದೂ-ಮುಸ್ಲಿಂ ಕಾರ್ಡ್ ಬಳಸಲು ಬಯಸುತ್ತಾರೆ. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ವಿಭಜಿಸಿ ಸರ್ಕಾರ ರಚಿಸಲು ಬಯಸುತ್ತಾರೆ. ಕಾಂಗ್ರೆಸ್ ಅದನ್ನು ಯಾವಾಗಲೂ ಮಾಡಿಕೊಂಡು ಬಂದಿದೆ ಎಂದು ಅವರು ಹೇಳಿದ್ದಾರೆ.
Advertisement
Advertisement
ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ಜಾರಿಗೊಳಿಸುವ ಕಾಂಗ್ರೆಸ್‍ನ ಯೋಜನೆ ದೇಶದಲ್ಲಿ ಆರ್ಥಿಕ ಹಿಂಜರಿತವನ್ನು ಉಂಟುಮಾಡುತ್ತದೆ. ಅರ್ಜಂಟೈನಾ ಮತ್ತು ವೆನೆಜುವೆಲಾ ಇದನ್ನು ಜಾರಿಗೆ ತಂದು ಹಾನಿಕಾರಕ ಪರಿಣಾಮಗಳನ್ನು ಎದುರಿಸಿತ್ತು. ಹೂಡಿಕೆದಾರರು ಭಾರತದ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್‍ಗೆ ನನ್ನದೊಂದು ಸಲಹೆ ಇದೆ, ಅವರು ಸರ್ಕಾರ ರಚನೆಗಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕೀಯದ ಗುರಿ ರಾಷ್ಟ್ರ ನಿರ್ಮಾಣಕ್ಕಾಗಿ ಇರಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: Mumbai Attack | ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ