ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷರ ಸ್ಥಾನಕ್ಕೆ ಇಂದು ಸಾಂಕೇತಿಕ ಚುನಾವಣೆ ನಡೆಯಲಿದೆ. ಎರಡನೇ ಅವಧಿಗೆ ಡಿ.ಕೆ.ಶಿವಕುಮಾರ್ (D.K Shivakumar) ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ.
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ (President) ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ 3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ಪರ್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್ ಪಾಸ್ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ: ಡಿಕೆಶಿ
Advertisement
Advertisement
ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಎಐಸಿಸಿಯು ನೀಡಿರುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲು ತೀರ್ಮಾನಿಸಲಾಗಿದೆ. ಡಿಕೆಶಿ ಅವಿರೋಧವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ.
Advertisement
ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ (Election) ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ.