ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತವರು ಹಿಮಾಚಲ ಪ್ರದೇಶದಲ್ಲಿ ನಡೆದ ಉಪ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಬಿಜೆಪಿ ಪಡೆದುಕೊಂಡಿಲ್ಲ, ಇದು ಜನ ಸಾಮಾನ್ಯರು ನೀಡಿದ ಬೆಲೆ ಏರಿಕೆಯ ಉಡುಗೊರೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಹೇಳಿದ್ದಾರೆ.
ಉಪ ಚುನಾವಣೆ ಫಲಿತಾಂಶದ ಬಳಿಕ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೀಪಾವಳಿಗೆ ದೇಶಾದ್ಯಂತ ಜನರು ಸೋಲಿನ ಉಡುಗೊರೆ ನೀಡಿದ್ದಾರೆ ಎಂದು ವ್ಯಾಖ್ಯಾನಿಸಿದರು.
Advertisement
Advertisement
ಹಿಮಾಚಲ ಪ್ರದೇಶದಲ್ಲಿ ಮೂರು ವಿಧಾನಸಭೆ, ಒಂದು ಲೋಕಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಆದರೆ ಇಲ್ಲಿ ಒಂದು ಕ್ಷೇತ್ರದಲ್ಲೂ ಬಿಜೆಪಿ ಗೆದ್ದಿಲ್ಲ. ಕಾಂಗ್ರೆಸ್ ಹಿಮಾಚಲ ಸೇರಿದಂತೆ ಬೇರೆ ಬೇರೆ ಪ್ರದೇಶಗಳಲ್ಲಿ ಉತ್ತಮ ಸಾಧನೆ ಮಾಡಿದೆ. ರಾಜಸ್ಥಾನದಲ್ಲಿ ನಡೆದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರು.
Advertisement
ಕೋಮುವಾದ ದೇಶದ ಜನರಲ್ಲಿ ಒಡಕು ಉಂಟು ಮಾಡಿತ್ತು. ಆದರೆ ಕರ್ನಾಟಕದಲ್ಲಿ ಬಿಜೆಪಿಯ ಕೋಮುವಾದದ ಸ್ಟಾಟರ್ಜಿ ವರ್ಕೌಟ್ ಆಗಿಲ್ಲ. ಹೀಗಾಗಿ ಹಾನಗಲ್ ನಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದೆ 2023 ರ ಚುನಾವಣೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದ್ದು ಸರ್ಕಾರ ರಚನೆ ಮಾಡಲಿದೆ ಎಂದರು. ಇದನ್ನೂ ಓದಿ: ಸಿಂದಗಿಯಲ್ಲಿ ಲಿಂಗಾಯತರು ಮತ ಹಾಕಿಲ್ಲ, ರಾಷ್ಟ್ರೀಯ ಪಕ್ಷಗಳು ಹಣದ ಹೊಳೆ ಹರಿಸಿ ಗೆದ್ದಿವೆ: ಹೆಚ್‍ಡಿಡಿ ಆರೋಪ
Advertisement
ಸಿಂದಗಿಯಲ್ಲಿ ಬಿಜೆಪಿ ಹಣ ಖರ್ಚು ಮಾಡಿ ಗೆದ್ದಿದೆ, ಕ್ಷೇತ್ರದಲ್ಲಿ ಹಣ ಹಂಚಿರುವುದು ಬಹಿರಂಗ ಸತ್ಯ ಮುಂದಿನ ದಿನಗಳಲ್ಲಿ ಇದು ನಡೆಯಲ್ಲ. ಒಂದೇ ತಿಂಗಳಲ್ಲಿ 36 ಬಾರಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗಿದೆ. ಜನರು ಪರ್ಯಾಯ ಬಯಸಿದ್ದು ಮುಂದೆ ಕಾಂಗ್ರೆಸ್ ಗೆ ಉತ್ತಮ ದಿನಗಳಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.