ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ (Congress Presidential Poll) ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್.ತ್ರಿಪಾಠಿ (K.N.Tripathi) ಅವರ ನಾಮಪತ್ರವನ್ನು ಶನಿವಾರ ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ತಿಳಿಸಿದ್ದಾರೆ.
Advertisement
ಈಗ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಶಶಿ ತರೂರ್ (Shashi Tharoor) ನಡುವೆ ಮಾತ್ರ ಪೈಪೋಟಿ ಇದ್ದು, ಕುತೂಹಲ ಮೂಡಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಿಸ್ತ್ರಿ, ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಒಟ್ಟು 20 ನಮೂನೆಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ನಾಲ್ಕು ಸಹಿ ಸಮಸ್ಯೆಯಿಂದಾಗಿ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ
Advertisement
Advertisement
ನಿನ್ನೆ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಆ ಪೈಕಿ ನಾಲ್ಕು ನಾಮಪತ್ರಗಳನ್ನು ಸಹಿ ಸಮಸ್ಯೆಯಿಂದಾಗಿ ಪರಿಶೀಲನಾ ಸಮಿತಿ ತಿರಸ್ಕರಿಸಿದೆ. ಹಿಂಪಡೆಯಲು ಅಕ್ಟೋಬರ್ 8 ರವರೆಗೆ ಸಮಯವಿದ್ದು, ಅದರ ನಂತರ ಚಿತ್ರವು ಸ್ಪಷ್ಟವಾಗುತ್ತದೆ. ಯಾರೂ ಹಿಂತೆಗೆದುಕೊಳ್ಳದಿದ್ದರೆ, ಮತದಾನ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ ಎಂದು ಮಿಸ್ತ್ರಿ ಮಾಹಿತಿ ನೀಡಿದ್ದಾರೆ.
Advertisement
ಮಲ್ಲಿಕಾರ್ಜುನ ಖರ್ಗೆ ಒಟ್ಟು 14, ಶಶಿ ತರೂರ್ ಐದು ಮತ್ತು ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆ.ಎನ್.ತ್ರಿಪಾಠಿ ಒಂದು ನಾಮಪತ್ರ ಸಲ್ಲಿಸಿದ್ದರು. ಈಗ ತ್ರಿಪಾಠಿ ಅವರ ನಾಮಪತ್ರ ತಿರಸ್ಕೃತವಾಗಿದ್ದು, ಖರ್ಗೆ ಮತ್ತು ಶಶಿ ತರೂರ್ ಅವರು ಮಾತ್ರ ಕಣದಲ್ಲಿರಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಖರ್ಗೆ – ಕಡೆಯ ಹಂತದಲ್ಲಿ ಕಣಕ್ಕಿಳಿಯುವ ಸಾಧ್ಯತೆ