ಕೈ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕೌಂಟರ್ ನೀಡಲು ಈ ವಿಚಾರ ಮುಂದಿಟ್ಟು ಪ್ರತಿಭಟಿಸಲಿದೆ ಕಾಂಗ್ರೆಸ್

Public TV
1 Min Read
oscar fernandes

ಬೆಂಗಳೂರು: ಐಟಿ ದಾಳಿಗೆ ಒಳಗಾದ ಕೈ ನಾಯಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ನಗರದಲ್ಲಿ ಐಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮಾತನಾಡಿ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿಯವರೇ ದಾರಿ ಮಾಡಿ ಕೊಡುತ್ತಿದ್ದಾರೆ. ಗುಜರಾತ್ ನಲ್ಲಿ ನಮ್ಮ ಶಾಸಕರನ್ನು ಖರಿದೀಸಲು ಮುಂದಾದ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಖರೀದಿಸಲು ಹೋಗಿದ್ದು, ಪ್ರಜಾಪ್ರಭುತ್ವದ ವಿರೋಧಿ ಬೆಳವಣಿಗೆಯಾಗಿದೆ. ಬಿಜೆಪಿಯವರು ಇಲ್ಲಿ ಐಟಿ ದಾಳಿ ಆಗಿರುವ ತಮ್ಮ ನಾಯಕರ ವಿರುದ್ಧ ಪ್ರತಿಭಟನೆ ನಡೆಸಲಿ. ಅಮಿತ್ ಶಾ ಮೊದಲು ಗುಜರಾತ್ ರಾಜ್ಯದ ಕಡೆ ಗಮನ ಹರಿಸಲಿ ಎಂದು ಅವರು ವಾಗ್ದಾಳಿ ನಡೆಸಿದರು.

ಕರ್ನಾಟಕದ ಮಾದರಿಯನ್ನು ಕೇಂದ್ರ ಸರಕಾರ ಅನುಸರಿಸಿ ಶಾದಿ ಶಗೂನ್ ಜಾರಿ ಮಾಡುತ್ತಿರುವುದು ಸ್ವಾಗತಾರ್ಹ. ಹಸಿವು ಮುಕ್ತ ಭಾರತ, ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ಗುರಿಯಾಗಿದ್ದು, ಇಂದಿರಾ ಕ್ಯಾಂಟೀನ್ ಕಾರ್ಯಕ್ರಮ ಮೂಲಕ ಬಡವರಿಗೆ ಆಹಾರ ಪೂರೈಕೆ ಆಗಲಿದೆ. ಇದು ನಮ್ಮ ಸರ್ಕಾರದ ದೊಡ್ಡ ಹೆಜ್ಜೆಯಾಗಿದ್ದು ಈ ಯೋಜನೆ ಜಾರಿಗೆ ತಂದ ಸರ್ಕಾರಕ್ಕೆ ಅಭಿನಂದನೆಗಳು ಎಂದು ಆಸ್ಕರ್ ಫೆರ್ನಾಂಡಿಸ್ ಹೊಗಳಿದರು.

ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾರ್ನಿಂಗ್‍ಗೆ ಫುಲ್ ಆ್ಯಕ್ವೀವ್ ಆಗಿರುವ ಬಿಜೆಪಿ ನಾಯಕರು ಈ ಶುಕ್ರವಾರದಿಂದಲೇ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮುಂದಿನ ಶುಕ್ರವಾರದಿಂದ ಸತತ ಒಂದು ವಾರ ಕಾಲ, ಐಟಿ ದಾಳಿಗೆ ಒಳಗಾದ ಇಂಧನ ಸಚಿವ ಡಿ ಕೆ ಶಿವಕುಮಾರ್, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಪಂಜಿನ ಮೆರವಣಿಗೆ, ಬೈಕ್‍ರ್ಯಾಲಿ ಮೂಲಕ ಜನ ಜಾಗೃತಿ ಮೂಡಿಸುವುದಾಗಿ ಎಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಘೋಷಣೆ ಮಾಡಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *