ಬೆಂಗಳೂರು: ಬ್ಯಾರಿಕೇಡ್ ಮೇಲಿಂದ ಹಾರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
Advertisement
ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ಮಾಡುತ್ತಿದೆ. ಈ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಶಾಂತಿನಗರ ಇಡಿ ಕಚೇರಿಯಲ್ಲಿ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಶಾಂತಿನಗರದ ವಿಲ್ಸನ್ ಗಾರ್ಡನ್ ಮತ್ತು ಶೇಷಾದ್ರಿ ಪುರಂನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡಿ ವಿರುದ್ಧ ಆಕ್ರೋಶ – ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು
Advertisement
Advertisement
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿಕೆಶಿ, ಕಾರಿಗೆ ಬೆಂಕಿ ಹಾಕಿದ್ದು ಜನರ ಭಾವನೆ. ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿಕೊಂಡರು. ಅಲ್ಲದೇ ಪ್ರತಿಭಟನೆ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್‍ನ್ನು ಡಿಕೆಶಿ, ದಿನೇಶ್ ಗುಂಡೂರಾವ್, ನಲಪಾಡ್ ಹಾರಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ಶೇಷಾದ್ರಿಪುರಂ ಮತ್ತು ಶಾಂತಿ ನಗರಕ್ಕೆ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಹಿರಿಯ ಪೊಲೀಸ್ ಅಧಿಕಾರಿ ಮಾತನಾಡಿದ್ದು, ಕಿಡಿಗೇಡಿಗಳ ಕೃತ್ಯ ಪ್ರಕರಣ ದಾಖಲಿಸಿ ಆಗಿದೆ. ಆರೋಪಿಗಳು ಭಯ ಹುಟ್ಟಿಸೋ ಯತ್ನ ಮಾಡಿದ್ದಾರೆ ಅವರನ್ನು ಬಂಧಿಸಲಾಗುವುದು ಎಂದು ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ವಾಹನ ತೊಳೆಯಲು ಹೋಗಿ ನೀರು ಪಾಲಾದ ತಂದೆ, ಮಗ