ಕೊಡಗು: ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಎನ್ನುವ ಮೂಲಕ ಸಚಿವ ಈಶ್ವರಪ್ಪ ದೇಶದ್ರೋಹದ ಕೆಲಸ ಮಾಡಿದ್ದು, ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಛೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಸಚಿವ ಈಶ್ವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ತೊಲಗಲಿ ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಬಂಧಿಸಲಿ ಎಂದು ಆಗ್ರಹಿಸಿದ್ದು, ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಕೇಸರಿ ಚಪ್ಪಲಿ ಬೇಕಾದರೂ ಧರಿಸಲಿ, ನಮ್ಗೆ ಹಿಜಬ್‍ಗೆ ಅನುಮತಿ ನೀಡಿ – ಗೋಕಾಕ್ ವಿದ್ಯಾರ್ಥಿನಿಯರು
ಈ ವೇಳೆ ಮಾತನಾಡಿದ ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ ಆಗಿದ್ದವರು. ಈಗ ಒಬ್ಬ ಸಚಿವರಾಗಿ ದೇಶ ದ್ರೋಹದ ಹೇಳಿಕೆ ನೀಡಿದ್ದಾರೆ. ಇಂತಹವರನ್ನು ಸಚಿವ ಸ್ಥಾನದಿಂದ ವಜಾಮಾಡಿ ಬಂಧಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ತಮ್ಮ ಪಕ್ಷದ ಕಾರ್ಯಕರ್ತನ ಉಳಿಸಲಾಗದ ಸರ್ಕಾರ, ರಾಜ್ಯದ ಜನತೆಯನ್ನು ರಕ್ಷಿಸಲು ಸಾಧ್ಯವೇ: ಹೆಚ್‌ಡಿಕೆ