ಬೆಂಗಳೂರು: ರಾಜ್ಯ ಸರ್ಕಾರ ಪ್ರವಾಹ, ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಮುಖವಾಗಿ 3 ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
1. ಪ್ರವಾಹಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಮತ್ತು ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಚೆ
2. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಸರ್ಕಾರ ಒದಗಿಸಿರುವ ನೆರವಿನ ಬಗ್ಗೆ ಚರ್ಚೆ ನಡೆಯಲಿದೆ.
3. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಅನುದಾನ ಕಡಿತ ಮಾಡಿರುವ ಬಗ್ಗೆ ಕೂಡ ಸಿಎಲ್ ಪಿಯಲ್ಲಿ ಚರ್ಚೆ ನಡೆಯಲಿದೆ.
Advertisement
Advertisement
ಶಾಸಕಾಂಗ ಪಕ್ಷದ ಸಭೆಯ ಬಳಿಕ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ನೆರೆ ಹಾಗೂ ಬರ ಪೀಡಿತ ಪ್ರದೇಶಗಳನ್ನು ಸರ್ಕಾರ ಕಡೆಗಣಿಸಿದೆ. ಅಲ್ಲದೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ತಾರತಮ್ಯ ಮಾಡಲಾಗುತ್ತಿದೆ. ಅನದಾನವನ್ನು ತಡೆ ಹಿಡಿಯಲಾಗಿದೆ ಎಂದು ಕೈ ಶಾಸಕರುಗಳು ಪ್ರತಿಭಟನೆ ನಡೆಸಲಿದ್ದಾರೆ.
Advertisement
ದೇಶದಲ್ಲಿಯ ಬೆಳವಣಿಗೆಗಳು ಆತಂಕಕಾರಿಯಾಗಿವೆ.
ಸ್ವಾರ್ಥಕ್ಕಾಗಿ ರಾಷ್ಟ್ರೀಯತೆ ಬಳಕೆಯಾಗುತ್ತಿದೆ,
ಅಭಿವ್ಯಕ್ತಿ ಸ್ವಾತಂತ್ರ್ಯದ ದಮನವಾಗುತ್ತಿದೆ.
ಧರ್ಮಗಳು ರಾಜಕೀಯ ಅಸ್ತ್ರಗಳಾಗಿ ಬಳಕೆಯಾಗುತ್ತಿದೆ.
ಇಂಥಹ ಸಿದ್ಧಾಂತಗಳ ವಿರುದ್ಧವೇ ಗಾಂಧಿ ಅವರು ನಿರಂತರ ಹೋರಾಟ ಮಾಡಿದರು.
ಇದನ್ನು ನಾವು ಯುವ ಸಮುದಾಯಕ್ಕೆ ಹೇಳಬೇಕಿದೆ.
– @dineshgrao pic.twitter.com/xGSW5vrN9l
— Karnataka Congress (@INCKarnataka) September 17, 2019