ಬೆಂಗಳೂರು: ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು (Freedom Fighters) ಮೂಲೆಗೆ ತಳ್ಳಿದ್ದು ಕಾಂಗ್ರೆಸ್ (Congress) ಪಕ್ಷ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ (Republic Day 2025) ಶುಭಾಶಯ ಕೋರಿದರು. ಅಂಬೇಡ್ಕರ್ ಬರೆದ ಸಂವಿಧಾನವನ್ನು ಅರ್ಪಿಸಿಕೊಂಡು 75 ವರ್ಷವಾಗಿದೆ. ಇಂದು 76ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಗಟ್ಟಿಯಾದ ಸಂವಿಧಾನವನ್ನು ನೀಡಿದ ದಿನವನ್ನೇ ಗಣರಾಜ್ಯೋತ್ಸವವಾಗಿ ಆಚರಿಸುತ್ತಿದ್ದೇವೆ. ದೇಶವನ್ನು ಯಾವರೀತಿ ನಡೆಸಬೇಕು ಎನ್ನುವುದು ಸಂವಿಧಾನದಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Kotekar Bank Robbery; ಕೇವಲ 4 ದಿನದಲ್ಲಿ ಪ್ರಕರಣ ಭೇದಿಸಿ ಎಲ್ಲಾ ಚಿನ್ನಾಭರಣ ವಶಕ್ಕೆ: ಗುಂಡೂರಾವ್
ನಂತರ ಮಾತನಾಡಿದ ಅವರು, ಬ್ರಿಟಿಷರ ಜೊತೆ ಹೋರಾಟ ಮಾಡಿದ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಅಪಮಾನ ಮಾಡಿದ್ದು ಆಯ್ತು, ಇದೀಗ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಮೂಲೆಗೆ ತಳ್ಳಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯಗಳ ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ – ಥಾವರ್ ಚಂದ್ ಗೆಹ್ಲೋಟ್
ಸಂವಿಧಾನ ನಿರ್ಮಾಣ ಮಾಡಿದ ದಿನವನ್ನು ನಕಲಿ ಗಾಂಧಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದ ನಂತರವೂ ಗಾಂಧಿ ಕುಟುಂಬದವರು ಅಧಿಕಾರವನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಕೇವಲ ಅಧಿಕಾರಿಕ್ಕಾಗಿ ಮಾತ್ರ ನಾನು ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಈ ಸರ್ಕಾರದಲ್ಲಿ ಲೂಟಿ, ಭ್ರಷ್ಟಾಚಾರ ಮಾತ್ರ ನಿರಂತರವಾಗಿ ನಡೆಯುತ್ತಲೇ ಬರುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ
ಅಲ್ಲದೇ ಅನ್ನಕ್ಕಾಗಿ ಹೋರಾಟ ಮಾಡಿದವರನ್ನು ಸಮಾಜ ಮರೆತುಬಿಟ್ಟಿರುವುದು ಶೋಚನೀಯ ಎಂದು ಛಲವಾದಿ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ