ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ (L.Manmohan Singh) ಅವರ ನಿಧನ ಬಳಿಕ ಅವರಿಗೆ ಭಾರತ ರತ್ನ ಪ್ರಶಸ್ತಿ (Bharat Ratna Award) ನೀಡಬೇಕು ಎನ್ನುವ ಒತ್ತಡ ಹೆಚ್ಚುತ್ತಿದೆ. ಭಾರತ ರತ್ನ ನೀಡುವಂತೆ ಒತ್ತಾಯಿಸಿ ತೆಲಂಗಾಣ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಒತ್ತಡ ಹಾಕಿದ ಬೆನ್ನಲ್ಲೇ ಈ ಚರ್ಚೆ ಮುನ್ನಲೆಗೆ ಬಂದಿದೆ.
ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮಹಾನ್ ನಾಯಕರಾಗಿದ್ದು, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಕೇಂದ್ರ ಸರ್ಕಾರ ತೆಲಂಗಾಣ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ವಿಚಾರ, ವ್ಯವಹಾರದಲ್ಲಿ ಕಲಹ – ಆತ್ಮಹತ್ಯೆಗೆ ಶರಣಾದ ದೆಹಲಿ ಉದ್ಯಮಿ
ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ನರೇಗಾ ಮುಂತಾದ ಕಾರಣಗಳಿಗಾಗಿ ಮನಮೋಹನ್ ಸಿಂಗ್‌ಗೆ ಭಾರತ ರತ್ನ ನೀಡಬೇಕೆಂದು ತೆಲಂಗಾಣ ವಿಧಾನಸಭೆ ಒತ್ತಾಯಿಸಿದ್ದು ಸರಿಯಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಶುಭರಂಶ್ ಕುಮಾರ್ ರೈ ಹೇಳಿದ್ದಾರೆ. ದೇಶದ ಅತ್ಯುನ್ನತ ಗೌರವ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸಿ.ಟಿ ರವಿ ಕೇಸ್ ಸಿಐಡಿ ತನಿಖಾ ವರದಿ ಬಂದ ಬಳಿಕ ಕ್ರಮ: ಸಿದ್ದರಾಮಯ್ಯ
ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ, ವಿಧಾನಸಭೆಯಲ್ಲಿ ನಿರ್ಣಯಗಳನ್ನು ಅಂಗೀಕರಿಸುವ ಬದಲು ಅವರು ಸೋನಿಯಾ ಗಾಂಧಿಯನ್ನು ಕೇಳಬೇಕು ಎಂದು ಟೀಕಿಸಿದ್ದಾರೆ. ಮನಮೋಹನ್ ಸಿಂಗ್ ಅವರು ಕಳೆದ ವಾರ 92ನೇ ವಯಸ್ಸಿನಲ್ಲಿ ನಿಧನರಾದರು ಮತ್ತು ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಇಲ್ಲ: ಸಿದ್ದರಾಮಯ್ಯ