ಬೆಂಗಳೂರು: 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿಯಾಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.
ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
— Karnataka Congress (@INCKarnataka) May 27, 2023
Advertisement
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ. ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ ಎಂದು ಮನವಿ ಮಾಡಿದೆ.
Advertisement
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ.
Advertisement
Advertisement
ಕರ್ನಾಟಕ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಇದರ ಬೆನ್ನಲ್ಲೇ 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪಟ್ಟಿ ವೈರಲ್ ಆಗಿತ್ತು. ಆದರೆ ಅದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ.