ಬೆಂಗಳೂರು: ಮೈತ್ರಿ ನಾಯಕರಿಗೆ ಅತೃಪ್ತ ಶಾಸಕರು ಮೂರು ದಿನಗಳ ಗಡುವು ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಹೌದು. ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಮತ್ತೆ ಅತೃಪ್ತರಿಂದ ಬಂಡಾಯ ಫಿಕ್ಸ್ ಆಗುವ ಎಲ್ಲಾ ಲಕ್ಷಣಗಳಿದೆ. ಈ ಮಧ್ಯೆ ಅತೃಪ್ತ ಶಾಸಕರು ಮೈತ್ರಿ ನಾಯಕರಿಗೆ ಮೂರು ದಿನಗಳ ಗಡುವು ನೀಡಿದ್ದಾರೆ.
Advertisement
Advertisement
ಈ ಬಾರಿ ಅತೃಪ್ತ ಶಾಸಕರ ಬಂಡಾಯ ತುಂಬಾ ಡಿಫರೆಂಟ್ ಆಗಿರಲಿದೆ. ಮೈತ್ರಿ ನಾಯಕರಿಗೆ ಗಡುವು ಕೊಟ್ಟರೂ ಅತೃಪ್ತ ಕೈ ಶಾಸಕರು ತಮಗೂ ಸಚಿವ ಸಂಪುಟದಲ್ಲಿ ಸ್ಥಾನ ಕೊಡಿ. ಇಲ್ಲದಿದ್ದರೆ ನಾವೆಲ್ಲ ರಮೇಶ್ ಜಾರಕಿಹೊಳಿ ಅವರ ತಂಡ ಸೇರುತ್ತೇವೆ. ಈ ಹಿನ್ನೆಲೆಯಲ್ಲಿ ಇನ್ನು ಮೂರು ದಿನದೊಳಗೆ ತೀರ್ಮಾನ ಕೈಗೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
Advertisement
ಈ ಮೂಲಕ ಅತೃಪ್ತರು ಮೈತ್ರಿ ನಾಯಕರಿಗೆ ಬೆದರಿಕೆ ಹಾಕಿದ್ರಾ ಅತೃಪ್ತರು ಅನ್ನೋ ಪ್ರಶ್ನೆ ಮೂಡಿದೆ. ಒಟ್ಟಿನಲ್ಲಿ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದ ಸಂಪುಟ ವಿಸ್ತರಣೆಯಾಗಲಿದ್ದು, ಇಬ್ಬರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಣೆಬೆನ್ನೂರು ಶಾಸಕ ಆರ್ ಶಂಕರ್ ಹಾಗೂ ಮುಳಬಾಗಿಲು ಶಾಸಕ ನಾಗೇಶ್ ಇವರಿಬ್ಬರೂ ಪಕ್ಷೇತರ ಶಾಸಕರಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಸಿಕೊಳ್ಳುವ ಯತ್ನ ನಡೆಸಲಾಗುತ್ತಿದ್ದು, ಹೀಗಾಗಿ ಪಕ್ಷೇತರರನ್ನ ಹಿಡಿದಿಟ್ಟುಕೊಳ್ಳಲು ಪ್ಲಾನ್ ರೂಪಿಸಲಾಗಿದೆ ಎನ್ನಲಾಗಿದೆ.
Advertisement
ಕುಂದಗೋಳ ಶಾಸಕ ಶಿವಳ್ಳಿ ನಿಧನದಿಂದ ತೆರವಾಗಿರುವ ಹಿನ್ನೆಲೆಯಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದ್ದರು. ಆದರೆ ರಾಮಲಿಂಗಾ ರೆಡ್ಡಿ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ.
ಸದ್ಯ ಇಬ್ಬರಿಗೆ ಅವಕಾಶ ನೀಡಲಾಗುತ್ತಿದ್ದು, ಅತೃಪ್ತ ಶಾಸಕರಿಗೆ ಒಬ್ಬರಿಗೆ ಅವಕಾಶ ನೀಡಿದರೆ ಇನ್ನೊಬ್ಬರಿಗೆ ಬೇಸರವಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರಿಗೆ ಸದ್ಯಕ್ಕೆ ಸಚಿವ ಭಾಗ್ಯ ಇಲ್ಲ ಎಂದು ಹೇಳಲಾಗುತ್ತಿದೆ.