ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೇಗಾದರು ಮಾಡಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂದು ಮೂರು ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಇದೇ ಹೊತ್ತಿನಲ್ಲಿ ಕಾಂಗ್ರೆಸ್ (Congress) ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ 40 ಮಂದಿ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shetter), ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya), ಕನ್ನಯ್ಯ ಕುಮಾರ್, ನಟಿ ಮತ್ತು ಮಾಜಿ ಸಚಿವೆ ಉಮಾಶ್ರೀ ಹಾಗೂ ಹಾಸ್ಯನಟ ಸಾಧು ಕೋಕಿಲ (Sadhu Kokila) ಅವರಿಗೂ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: JDS ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್ – 12 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಬದಲಾವಣೆ
ಪ್ರಿಯಾಂಕಾ ಗಾಂಧಿ ವಾದ್ರಾ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಹ ಪಟ್ಟಿಯಲ್ಲಿ ಸೇರಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮೇ 10 ರಂದು ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಮೂರು ಪಕ್ಷಗಳು ಹಲವು ಹಂತಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನೂ ಕೆಲವು ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಪ್ರಕಟಿಸಬೇಕಿದೆ. ನಾಮಪತ್ರ ಸಲ್ಲಿಕೆ ಕಾರ್ಯವೂ ಬಿರುಸುಗೊಂಡಿದೆ. ಇದನ್ನೂ ಓದಿ: ಪತ್ನಿ ಬಳಿಯೇ 20 ಲಕ್ಷ ರೂ. ಸಾಲ ಪಡೆದಿರುವ ಸಚಿವ ಸೋಮಣ್ಣ