ನವದೆಹಲಿ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶ ಮಾಡಿದ ಕಾಂಗ್ರೆಸ್ (Congress) ವಿಶೇಷ ಸಮಗ್ರ ಪರಿಷ್ಕರಣೆ (SIR) ಮಾತನಾಡುತ್ತಿದೆ. ತಮಗೆ ಬೇಕಾದವರನ್ನು ಸಂವಿಧಾನಿಕ ಹುದ್ದೆಯಲ್ಲಿ ಕೂರಿಸಿ ಕಾಂಗ್ರೆಸ್ ಆಡಳಿತ ನಡೆಸಿತ್ತು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ (Nishikant Dubey) ಕಿಡಿಕಾರಿದರು.
ಲೋಕಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ನಿಶಿಕಾಂತ್ ದುಬೆ ಮಾತನಾಡಿ ಕಾಂಗ್ರೆಸ್ ಯಾವ ರೀತಿ ವ್ಯವಸ್ಥೆಯನ್ನು ಈ ಹಿಂದೆ ಬದಲಾಯಿಸಿತ್ತು ಎಂದು ದಾಖಲೆಯನ್ನು ಮುಂದಿಟ್ಟು ತಿರುಗೇಟು ನೀಡಿದರು.
ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಇಂದಿರಾ ಗಾಂಧಿ (Indira Gandhi) ಮತಕಳ್ಳತನ ಮಾಡಿ ಚುನಾವಣೆಯಲ್ಲಿ ಜಯಗಳಿಸಿದರು. ತನ್ನ ವಿರುದ್ಧ ಕೋರ್ಟ್ ತೀರ್ಪು ಬಂದಾಗ ಮೂವರು ನ್ಯಾಯಾಧೀಶರನ್ನು ಬೈಪಾಸ್ ಮಾಡಿ ಒಬ್ಬರನ್ನೇ 8.5 ವರ್ಷಗಳ ಕಾಲ ಮುಖ್ಯ ನ್ಯಾಯಮೂರ್ತಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.
ಸಂವಿಧಾನದ 42ನೇ ತಿದ್ದುಪಡಿಗೆ ಕಾರಣವಾದ 1976 ರ ಸ್ವರಣ್ ಸಿಂಗ್ ಸಮಿತಿಯನ್ನು ಉಲ್ಲೇಖಿಸಿದ ದುಬೆ, ಸ್ವರಣ್ ಸಿಂಗ್ ಸಮಿತಿಯನ್ನು 1976 ರಲ್ಲಿ ರಚಿಸಿ ರಾಷ್ಟ್ರಪತಿ ಅವರ ಇದ್ದ ಅಧಿಕಾರವನ್ನು ಕಿತ್ತುಕೊಂಡಿರಿ. ರಾಷ್ಟ್ರಪತಿಗಳು ರಬ್ಬರ್ ಸ್ಟ್ಯಾಂಪ್ ಆದರು. 42ನೇ ತಿದ್ದುಪಡಿ ಮಾಡುವ ಮೂಲಕ ಸಂವಿಧಾನದ ಎಲ್ಲಾ ಸಂಸ್ಥೆಗಳನ್ನು ಕೊನೆಗೊಳಿಸಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದರು. ಇದನ್ನೂ ಓದಿ: ಮತ ಕಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ: ರಾಹುಲ್
ಬಿಜೆಪಿ ಚುನಾವಣಾ ಆಯೋಗವನ್ನು ವಶಪಡಿಸಿಕೊಂಡಿದೆ ಎಂದು ರಾಹುಲ್ (Rahul Gandhi) ಆರೋಪಕ್ಕೆ ನಿಶಿಕಾಂತ್ ದುಬೆ ಈ ಹಿಂದೆ ಕಾಂಗ್ರೆಸ್ ನಿವೃತ್ತಿಯ ಬಳಿಕ ಚುನಾವಣಾ ಆಯುಕ್ತರಿಗೆ ಸರ್ಕಾರದಲ್ಲಿ ಯಾವ ರೀತಿ ಹುದ್ದೆ ನೀಡಿತ್ತು ಎಂಬುದರ ಬಗ್ಗೆ ಮಾತನಾಡಿದರು.
ಕಾಂಗ್ರೆಸ್ ಈಗ ಚುನಾವಣಾ ಆಯೋಗದ ಬಗ್ಗೆ ಮಾತನಾಡುತ್ತಿದೆ. ದೇಶದ ಮೊದಲ ಚುನಾವಣಾ ಆಯುಕ್ತ ಸುಕುಮಾರ್ ಸೇನ್ ನಿವೃತ್ತರಾದಾಗ ಬಳಿಕ ಅವರನ್ನು ಸುಡಾನ್‌ನ ರಾಯಭಾರಿಯಾಗಿ ನೇಮಿಸಲಾಗುತ್ತದೆ. ನಿವೃತ್ತಿಯ ನಂತರ ವಿ.ಎಸ್. ರಮಾದೇವಿ ಹಿಮಾಚಲ ಪ್ರದೇಶದ ರಾಜ್ಯಪಾಲರಾಗುತ್ತಾರೆ. ಟಿ.ಎನ್. ಶೇಷನ್ ಅವರು ನಿವೃತ್ತಿಯ ನಂತರ ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಕಣಕ್ಕೆ ಇಳಿಯುತ್ತಾರೆ. ಎಂ.ಎಸ್. ಗಿಲ್ ನಿವೃತ್ತರಾದ ನಂತರ 10 ವರ್ಷಗಳಿಗೂ ಹೆಚ್ಚು ಕಾಲ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದರು. ನೀವು ಯಾವ ಚುನಾವಣಾ ಆಯೋಗದ ಬಗ್ಗೆ ಮಾತನಾಡುತ್ತಿದ್ದೀರಿ? ನೀವು ಯಾವ ನ್ಯಾಯದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ: ಅಮಿತ್ ಶಾ
ಐಎಎಸ್, ಐಪಿಎಸ್ ಮತ್ತು ಅಖಿಲ ಭಾರತ ಸೇವೆಗಳ ಅಧಿಕಾರಿಗಳನ್ನು ದೇಶಕ್ಕೆ ನೀಡುವ ಯುಪಿಎಸ್‌ಸಿ ಸಂಸ್ಥೆಗೆ ಕಾಂಗ್ರೆಸ್ ಕಾರ್ಯಕರ್ತ ಬಟುಕ್ ಸಿಂಗ್ ಅವರನ್ನು 10 ವರ್ಷಗಳ ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಈ ಮೂಲಕ ಯುಪಿಎಸ್‌ಸಿ ಸಂಸ್ಥೆಯನ್ನೇ ಕಾಂಗ್ರೆಸ್ ಹಾಳು ಮಾಡಿತ್ತು ಎಂದು ಆಕ್ರೋಶ ಹೊರಹಾಕಿದರು.

