ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ರಚನೆ ಆಯ್ತು, ಖಾತೆ ಹಂಚಿಕೆಯೂ ಆಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಹಿರಿಯ ನಾಯಕರು ತಮ್ಮ ಮಕ್ಕಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
ಈ ಬಾರಿಯ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಕೋಲಾರ ಸಂಸದ ಮುನಿಯಪ್ಪರ ಪುತ್ರಿ ರೂಪಾ ಶಶಿಧರ್ ಅವರಿಗೆ ಸ್ಥಾನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಂಸದ ಮುನಿಯಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮೇಲೆ ಮುನಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಕ್ಷದಲ್ಲಿ ಯಾರು ನಿರ್ಧಾರ ಕೈಗೊಳ್ಳುತ್ತಾರೋ ಅಂತಾ ತಿಳಿಯುತ್ತಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
Advertisement
Advertisement
ಮುನಿಯಪ್ಪರ ಪುತ್ರಿ ಈ ಬಾರಿ ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ಮೊದಲ ಸಚಿವ ಸಂಪುಟದಲ್ಲಿ ಪುತ್ರಿಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಎರಡನೇ ಸುತ್ತಿನಲ್ಲಾದ್ರೂ ಮಗಳಿಗೆ ಸಚಿವ ಸ್ಥಾನ ನೀಡುವಂತೆ ಮುನಿಯಪ್ಪ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದಲಿತ ಎಡಗೈ ಕೋಟಾದಡಿ ಮಗಳನ್ನು ಸಚಿವರನ್ನಾಗಿ ಮಾಡಬೇಕೆಂದು ಮುನಿಯಪ್ಪ ಪಟ್ಟು ಹಿಡಿದಿದ್ದಾರೆ ಎಂದು ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ
Advertisement
ನಿಮ್ಮ ಮಕ್ಕಳಿಗಾದ್ರೆ ಸಚಿವ ಸ್ಥಾನ ನೀಡ್ತಾರೆ, ಆದರೆ ನಮಗೆ ಏಕೆ ಕೊಡಲ್ಲ ಅಂತಾ ಪರೋಕ್ಷವಾಗಿ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಅಸಮಾಧಾನ ಹಾಕಿದ್ದಾರಂತೆ. ಇತ್ತ ಸಿದ್ದರಾಮಯ್ಯ ಎರಡನೇ ಸುತ್ತಿನಲ್ಲಿ ವರುಣಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಯತೀಂದ್ರರಿಗೆ ಸಚಿವ ಸ್ಥಾನ ಕೊಡಿಸುವ ಯತ್ನದಲ್ಲಿದ್ದೀರಾ ಎಂದು ಮುನಿಯಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ಎಂಬಿ ಪಾಟೀಲ್ ಬಣದಲ್ಲಿರೋ 19 ಶಾಸಕರು ಯಾರು? ಇಲ್ಲಿದೆ ಪಟ್ಟಿ