ಶಿವಮೊಗ್ಗ: ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ನವರು ಸ್ಪರ್ಧೆ ಮಾಡುವ ಮುನ್ನ ಯೋಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು.
ಶಿವಮೊಗ್ಗದ ಗಾಯಿತ್ರಿ ಮಾಂಗಲ್ಯ ಕಲ್ಯಾಣ ಮಂದಿರದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಕಾಂಗ್ರೆಸ್‌ನವರು ಕೇವಲ ನಾಮಪತ್ರ ಸಲ್ಲಿಸಿದರೆ ಸಾಕು ಗೆದ್ದೇ ಗೆಲ್ಲುತ್ತೇವೆ ಎಂಬ ಸ್ಥಿತಿಯಿತ್ತು. ಆದರೆ ಇದೀಗ ಅಂತಹ ಕಾಲ ಹೋಗಿದೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ನವರು ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ಯೋಚನೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಹೇಳುವುದೆಲ್ಲ ಬರೀ ಸುಳ್ಳು: ಈಶ್ವರಪ್ಪ
ದೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನಂತರ ನರೇಂದ್ರ ಮೋದಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈಗಾಗಿಯೇ ಲೋಕಸಭೆಯಲ್ಲಿ ಕಾಂಗ್ರೆಸ್ ದಯನೀಯ ಸ್ಥಿತಿಗೆ ತಲುಪಿದೆ ಎಂದು ಕುಟುಕಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಶಾಶ್ವತವಾಗಿ ನಿರುದ್ಯೋಗಿ ಭಯ ಕಾಡುತ್ತಿದೆ: ಕಟೀಲ್ ವ್ಯಂಗ್ಯ
ವಿಧಾನ ಪರಿಷತ್‌ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ಸಿಗುತ್ತಿದೆ. ಹೀಗಾಗಿ ಸ್ಪರ್ಧೆ ಮಾಡಿರುವ 20 ಕ್ಷೇತ್ರಗಳಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ. ಬಿಜೆಪಿಗೆ ಸಿಗುತ್ತಿರುವ ಜನ ಬೆಂಬಲ ನೋಡಿ ಕಾಂಗ್ರೆಸ್ ಸ್ನೇಹಿತರು ದಿಗ್ಬ್ರಮೆಗೊಂಡಿದ್ದಾರೆ ಎಂದು ತಿಳಿಸಿದರು.