ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿ ಎಂದು ನಮ್ಮ ಕಾರ್ಯಕರ್ತರಿಗೆ ತಿಳಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದ್ದಾರೆ.
ನಮ್ಮ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದರಿಂದ ಮತಗಳ ವಿಭಜನೆ ಆಗುತ್ತದೆ. ಇದು ನೇರವಾಗಿ ಬಿಜೆಪಿಗೆ ಲಾಭವಾಗಲಿದ್ದು, ಆದ್ದರಿಂದ ಗುಜರಾತ್ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಕಣಕ್ಕೆ ಇಳಿಯುತ್ತಿಲ್ಲ. ಗುಜರಾತ್ ನಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮತ್ತು ಸಂಪುಟದ ಸಚಿವರು ಕೇವಲ ಚುನಾವಣೆ ಗೆಲ್ಲವುದಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಸಮಾಜವಾದಿ ಸರ್ಕಾರವಿದ್ದಾಗ ಉತ್ತರ ಪ್ರದೇಶ ರಾಜ್ಯದ 50 ಜಿಲ್ಲೆಗಳಲ್ಲಿ ತ್ವರಿತವಾಗಿ ರಸ್ತೆ ನಿರ್ಮಾಣ ಮಾಡಲಾಗಿತ್ತು ಅಂತಾ ಯೋಗಿ ಸರ್ಕಾರದ ವಿರುದ್ಧ ಹರಿಹಾಯ್ದರು.
Advertisement
Advertisement
Advertisement
ಬಿಜೆಪಿಯಿಂದ ಸುಳ್ಳು ಪ್ರಚಾರ: ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ ಕುರಿತು ಮಾತನಾಡಿದ ಅಖಿಲೇಶ್, ಬಿಜೆಪಿ ಸುಳ್ಳು ಪ್ರಚಾರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಒಬ್ಬ ವ್ಯಕ್ತಿಯ ಖಾಸಗಿ ಜೀವನವನ್ನು ಸಾರ್ವಜನಿಕ ರಂಗದಲ್ಲಿ ಸಿಡಿ ತೋರಿಸುವ ಮೂಲಕ ಬಿಜೆಪಿ ಸುಳ್ಳು ಪ್ರಚಾರದಲ್ಲಿ ತೊಡಗಿದೆ. ಗುಜರಾತ್ ಜನರು ಸಿಡಿ ವಿಚಾರಕ್ಕಿಂತ ನೋಟ್ ಬ್ಯಾನ್, ಜಿಎಸ್‍ಟಿ ವಿಚಾರಗಳಿಂದ ಬೇಸತ್ತಿದ್ದಾರೆ ಅಂತಾ ಅಂದ್ರು.
Advertisement
ಶ್ರೀ ಶ್ರೀ ರವಿಶಂಕರ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಇಬ್ಬರೂ ದೊಡ್ಡ ಸ್ವಾಮೀಜಿಗಳು. ಅವರಿಬ್ಬರ ನಡುವೆ ಯಾವ ಮಾತಕತೆಗಳು ನಡೆದಿವೆ ಎಂಬುದರ ಬಗ್ಗೆ ಗೊತ್ತಿಲ್ಲ. ದೇಶದ ಸಂವಿಧಾನವನ್ನು ಎಲ್ಲರು ಗೌರವಿಸುತ್ತಾರೆ ಹಾಗೂ ದೇಶದ ಕಾನೂನುಗಳು ಎಲ್ಲರಿಗೂ ಒಂದೇ ಆಗಿದ್ದು, ಎಲ್ಲರೂ ಅವುಗಳನ್ನು ಪಾಲನೆ ಮಾಡಬೇಕು. ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ನಾವೆಲ್ಲರೂ ಒಪ್ಪಿಕೊಳ್ಳಬೇಕು ಎಂದು ಅಖಿಲೇಶ್ ಹೇಳಿದರು.
Sri Sri Ravi Shankar meets UP CM Yogi Adityanath at the latter's residence in Lucknow. pic.twitter.com/7HJf42qEUk
— ANI UP/Uttarakhand (@ANINewsUP) November 15, 2017