ಬೆಂಗಳೂರು: ಬಿಜೆಪಿಯಲ್ಲಿ (BJP) ವಿರೋಧ ಪಕ್ಷ ನಾಯಕರ ಆಯ್ಕೆ ಇನ್ನೂ ಆಗದ ಹಿನ್ನೆಲೆ ಕಾಂಗ್ರೆಸ್ (Congress) ಟ್ವೀಟ್ ಮಾಡಿ ವಿರೋಧ ಪಕ್ಷ ನಾಯಕರು ಬೇಕಾಗಿದ್ದಾರೆ ಎಂದು ಟಾಂಗ್ ನೀಡಿತ್ತು. ಇದೀಗ ಬಿಜೆಪಿ ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಕಾಂಗ್ರೆಸ್ ತಲೆ ಕೆರೆದುಕೊಳ್ಳೋದನ್ನು ಬಿಡಲಿ ಎಂದು ತಿರುಗೇಟು ನೀಡಿದೆ.
Advertisement
ಬಿಜೆಪಿ ಟ್ವೀಟ್‌ನಲ್ಲೇನಿದೆ?
ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೆ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಕಾಂಗ್ರೆಸ್ ಇದರ ಬಗ್ಗೆ ತಲೆ ಕೆರೆದುಕೊಳ್ಳುವುದನ್ನು ಬಿಟ್ಟು ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿರುವ ನಮ್ಮ ಪಕ್ಷದ ಶಾಸಕರನ್ನು ಹೇಗೆ ಎದುರಿಸಬೇಕೆಂದು ತಮ್ಮ ಸರ್ಕಾರಕ್ಕೆ ಸಲಹೆ ನೀಡಲಿ.
Advertisement
ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ, @INCKarnataka ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ.
ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ.
1/5
— BJP Karnataka (@BJP4Karnataka) July 2, 2023
Advertisement
ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ, ಕಾಂಗ್ರೆಸ್ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ. ಇದನ್ನೂ ಓದಿ: BJP ಹೈಕಮಾಂಡ್ ಬುಲಾವ್ – ಇಂದು ಬಿಎಸ್‌ವೈ ದೆಹಲಿಗೆ
Advertisement
ಇಷ್ಟಕ್ಕೂ ಹೊಸದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸಿದ್ದರಾಮಯ್ಯ (Siddaramaiah) 2008ರಲ್ಲಿ ಅಂದಿನ ವಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಜುನ ಖರ್ಗೆಯವರಿಗೆ ದೊರೆತ ಕಾರಣ, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಆ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿದಾಗಲೂ, ಆ ಶಾಸಕರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.
ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ, @INCKarnataka ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ.
ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ.
1/5
— BJP Karnataka (@BJP4Karnataka) July 2, 2023
ಕಾರ್ಯಕ್ರಮವೊಂದರ ನಿಮಿತ್ತ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಜೊತೆ ಸಿದ್ದರಾಮಯ್ಯ ಒಟ್ಟಿಗೆ ಪ್ರಯಾಣಿಸಿದ್ದರು. ಆ ಸಂದರ್ಭವನ್ನು ತಮಗೆ ಲಾಭವಾಗುವ ಹಾಗೆ ಸುದ್ದಿ ಹಬ್ಬಿಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಸಿದ್ದರು. ಬೆದರಿಕೆಗೆ ಬಗ್ಗಿದ ಹೈಕಮಾಂಡ್ ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯರಿಗೆ ವಿಪಕ್ಷ ನಾಯಕ ಸ್ಥಾನ ನೀಡಿತ್ತು.
ಈ ಬೆಳವಣಿಗೆಯನ್ನು ಕಟುವಾಗಿ ಟೀಕಿಸಿದ್ದ ವಿರೋಧ ಪಕ್ಷದ ನಿರ್ಗಮಿತ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, 10 ಜನ ಶಾಸಕರೊಂದಿಗೆ ಬಂದ ಸಿದ್ದರಾಮಯ್ಯ, ಈಗ 100 ಶಾಸಕರ ಮುಖ್ಯಸ್ಥರಾಗಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದರು. ಈ ಎಲ್ಲಾ ಘಟನೆಗಳನ್ನು ಕಾಂಗ್ರೆಸ್ ಮರೆತಂತೆ ಕಾಣುತ್ತಿದೆ. ಚಿಂತಿಸಬೇಡಿ, ಕೆಲವೇ ದಿನಗಳಲ್ಲಿ ಈ ಘಟನೆಗಳು ಮತ್ತಷ್ಟು ವಿಭಿನ್ನವಾಗಿ ಪುನರಾವರ್ತನೆಯಾಗಲಿವೆ ಎಂದು ಬಿಜೆಪಿ ಟ್ವೀಟ್ ಮೂಲಕ ಹರಿಹಾಯ್ದಿದೆ. ಇದನ್ನೂ ಓದಿ: ಮೈಸೂರು ಸಂಸದರ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು
Web Stories