ಉಡುಪಿ: ಸತ್ಯ ಹೇಳಿದ ಪಕ್ಷದ ಇಬ್ಬರು ನಾಯಕರಿಗೆ ಕಾಂಗ್ರೆಸ್ ಉಚ್ಚಾಟನೆ ಮತ್ತು ಶೋಕಾಸ್ ನೋಟಿಸ್ ನೀಡಿರುವುದು ವಿಷಾದದ ಸಂಗತಿ. ಪಕ್ಷದ ಪ್ರಮುಖರಿಗೆ ತಮ್ಮದೇ ನಾಯಕರು ಯಾವ ರೀತಿ ಗೌರವ ಕೊಡುತ್ತಾರೆ ಎಂಬುದು ಗೊತ್ತಾಗಿದೆ. ಇದು ಕಾಂಗ್ರೆಸ್ ಜಾಯಮಾನ ಎಂದು ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಟೀಕಿಸಿದ್ದಾರೆ.
Advertisement
ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಷ್ಟು ಕಮಿಷನ್ ಪಡೆಯುತ್ತಾರೆ ಎಂಬ ಕುರಿತು ಚರ್ಚೆ ಮಾಡಿದ ಬೆಳವಣಿಗೆಗೆ ಸಂಬಂಧಪಟ್ಟಂತೆ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತ್ಯವನ್ನು ಮಾತನಾಡಿದವರಿಗೆ ಕಾಂಗ್ರೆಸ್‍ನಲ್ಲಿ ಈ ಸ್ಥಿತಿ ಬಂದಿದೆ. ನಾವು ಯಾರೂ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈ ರೀತಿ ನಡೆಸಿಕೊಳ್ಳುತ್ತಿರುವುದು ಕಾಂಗ್ರೆಸ್ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ. ದಲಿತ ನಾಯಕರ ಮನೆಗೆ ಬೆಂಕಿ ಹಾಕಿದಾಗಲೂ ಕಾಂಗ್ರೆಸ್ ಇದೇ ರೀತಿ ವರ್ತನೆ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂದು ಜೆಡಿಎಸ್ ಮುಳುಗಿಸಲು ಯತ್ನಿಸಿದ್ರು, ಇಂದು ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡ್ತಿದ್ದಾರೆ: ಎಚ್‌ಡಿಕೆ
Advertisement
Advertisement
ಸತ್ಯ ಹೇಳಿದವರನ್ನು ಪ್ರತಿ ಬಾರಿ ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತದೆ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಗೊತ್ತಾಗಿದೆ. ಈ ಮಾತುಕತೆಯಿಂದ ಕಾಂಗ್ರೆಸ್ ನಾಯಕರು ನಿಜವಾಗಿ ಎಚ್ಚೆತ್ತುಕೊಳ್ಳಬೇಕಿತ್ತು. ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕಾಗಿತ್ತು. ಈ ರೀತಿ ವರ್ತನೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್ ನೋಟಿಸ್ ಜಾರಿ
Advertisement