ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷ ಮುಳುಗಿ ಹೋಗುವಂತಹ ಹಡುಗು, ಹೀಗಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದೇನೆ ಅಂತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಶಾಸಕ ಸುಧಾಕರ್, ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿ ಭವಿಷ್ಯವಿಲ್ಲ. ದೇಶವನ್ನ ಕಟ್ಟುವ ಸಾಮಥ್ರ್ಯ ಇರೋದು ಕೇವಲ ಬಿಜೆಪಿ ಪಕ್ಷಕ್ಕೆ ಮಾತ್ರ. ದೇಶದ ಮೇಲೆ ವಿಶೇಷ ಪ್ರೀತಿ ಹಾಗೂ ಗೌರವ ಇರುವ ಪಕ್ಷ ಅದು ಬಿಜೆಪಿ. ಹೀಗಾಗಿ ಮುಂದಿನ 25-30 ವರ್ಷಗಳ ದೇಶದ ಅಭಿವೃದ್ಧಿ ಹಾಗೂ ರಾಜಕೀಯ ದೂರದೃಷ್ಟಿ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಎಂದು ತಿಳಿಸಿದರು.
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಶಾಸಕ ಸುಧಾಕರ್, ಕೆಲವೇ ದಿನಗಳಲ್ಲಿ ಸುಧಾಕರ್ ಮಂತ್ರಿಯಾಗುತ್ತಾರೆ ಎಂದು ಮಾನ್ಯ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದು. ಹೀಗಾಗಿ ಬಿಎಸ್‍ವೈ ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಅದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದಿದ್ದರು.