ಬೆಂಗಳೂರು: ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40 ಪರ್ಸೆಂಟ್ ಸರ್ಕಾರದಲ್ಲಿ ʼ3ನೇ ಸಿಎಂʼ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾಲೆಳೆದಿದೆ.
ಸಿಎಂ @BSBommai ಅವರೇ,
ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ?
ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ #PuppetCM ಮಾತ್ರವೇ?
ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ? pic.twitter.com/j7OMnIsIz7
— Karnataka Congress (@INCKarnataka) August 9, 2022
Advertisement
ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಬೊಮ್ಮಾಯಿ ಅವರಿಗೆ ಕುಟುಕಿದೆ. ಗೊಂಬೆ ಬಸವರಾಜ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಹೇಳಿದೆ. ಇದನ್ನೂ ಓದಿ: ರಾಜ್ಯದ 207 ಎ ಗ್ರೇಡ್ ದೇವಾಲಯಗಳಿಗೆ ಮಾಸ್ಟರ್ ಪ್ಲ್ಯಾನ್- ದೈವಸಂಕಲ್ಪ ಹೆಸರಿನಲ್ಲಿ ಅಭಿವೃದ್ಧಿ ಯೋಜನೆ
Advertisement
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!
40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.
ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
— Karnataka Congress (@INCKarnataka) August 9, 2022
Advertisement
ಟ್ವೀಟ್‌ನಲ್ಲೇನಿದೆ?
ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಬೊಂಬೆ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?
Advertisement
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ @BSBommai ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ!
ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್!
ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ @BJP4Karnataka?
— Karnataka Congress (@INCKarnataka) August 9, 2022
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಬೊಂಬೆ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ? ಇದನ್ನೂ ಓದಿ: ಮೈಸೂರು ಉದ್ಯಮಿಯ ಕೊಲೆ ಕೇಸ್‍ಗೆ ಟ್ವಿಸ್ಟ್ – ತಂದೆಯನ್ನೇ ಬರ್ಬರ ಹತೈಗೈದ 16ರ ಮಗ!
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ.
ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು @BJP4Karnataka ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ.
ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ.#PuppetCM
— Karnataka Congress (@INCKarnataka) August 9, 2022
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿ ವರ್ಸಸ್ ಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ?
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ರಾಜ್ಯ ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ಬಿಜೆಪಿ ಕಾಲೆಳೆದಿದೆ ಕಾಂಗ್ರೆಸ್.