ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು – ಬಿಜೆಪಿ ಸರ್ಕಾರದಿಂದ ‘ದಿನಕ್ಕೊಂದು ಹಗರಣ’ ಬರುತ್ತಿದೆ: ಕಾಂಗ್ರೆಸ್

Public TV
2 Min Read
BJP 3

ಬೆಂಗಳೂರು: ಹಿಂದೆ ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು. ಈಗ ಬಿಜೆಪಿ (BJP) ಸರ್ಕಾರದಲ್ಲಿ ‘ದಿನಕ್ಕೊಂದು ಹಗರಣ’ ಹೊರಬರುತ್ತಿವೆ. ನಿಗಮಗಳಲ್ಲಿ ಭ್ರಷ್ಟಾಚಾರ ಸುಗಮ’ ಎಂಬಂತಾಗಿದೆ ಎಂದು ಬಿಜೆಪಿ ಸರ್ಕಾರವನ್ನು ಟೀಕಿಸಿ ಕಾಂಗ್ರೆಸ್ (Congress) ಸರಣಿ ಟ್ವೀಟ್ ಮಾಡಿದೆ.

CONGRESS 4

ಟ್ವೀಟ್‍ನಲ್ಲಿ ಏನಿದೆ?
ದಲಿತರ ಸ್ವಾವಲಂಬನೆಗೆ ನಾವು ಜಾರಿಗೊಳಿಸಿದ್ದ ಐರಾವತ, ಸಮೃದ್ಧಿ ಯೋಜನೆಗಳಲ್ಲಿ ಅಕ್ರಮ ನಡೆದರೂ ಸರ್ಕಾರ ಕೈಕಟ್ಟಿ ಕುಳಿತಿದ್ದೇಕೆ ಬೊಮ್ಮಾಯಿ (Basavaraj Bommai) ಅವರೇ? ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ. ಶಾಸಕ ಅರವಿಂದ್ ಬೆಲ್ಲದ್ (Arvind Bellad) ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನು ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಳೆಯ ಪಿಂಚಣಿ ಯೋಜನೆ ಜಾರಿಗೆ: ರಾಹುಲ್ ಗಾಂಧಿ

ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬೊಮ್ಮಾಯಿ ಅವರೇ? ಇದರ ವಿರುದ್ಧ ನಿಮ್ಮ ಕ್ರಮವೇನು? ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್‍ನೋಟ್‍ನಲ್ಲಿ ಸ್ಪಷ್ಟವಾಗಿದೆ, ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ? ಶಾಸಕ ಅರವಿಂದ್ ಲಿಂಬಾವಳಿಯಿಂದ ಮಹಿಳೆಗೆ ನಿಂದನೆ. ಸಚಿವ ವಿ.ಸೋಮಣ್ಣರಿಂದ (V.Somanna) ಮಹಿಳೆಯ ಮೇಲೆ ಹಲ್ಲೆ. ಶಾಸಕ ಅರವಿಂದ್ ಬೆಲ್ಲದ್‍ರಿಂದ ಮಹಿಳೆಗೆ ನಿಂದನೆ. ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ. ಬೊಮ್ಮಾಯಿ ಅವರೇ, ಮಹಿಳೆಯರ ಘನತೆ ನಿಮ್ಮ ಅದ್ಯತೆಯಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *