ಇಂಫಾಲ್: ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‍ಎಲ್) ಅಂಗಡಿಗಳನ್ನು ತೆರೆಯಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದರು. ಸದ್ಯ ಈ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಇದು ಮಣಿಪುರದ ಮಹಿಳೆಯರಿಗೆ ಅವಮಾನ ಎಂದು ಕಿಡಿಕಾರಿದ್ದಾರೆ.
Advertisement
ಈ ಕುರಿತಂತೆ ಟ್ವೀಟ್ ಮಾಡಿರುವ ಜೈರಾಮ್ ರಮೇಶ್ ಅವರು, ಪ್ರಚಾರ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಭಾರತೀಯ ನಿರ್ಮಿತ ವಿದೇಶಿ ಮದ್ಯದ ಅಂಗಡಿಗಳನ್ನು ತೆರೆಯಲಾಗುವುದು ಎಂದು ಬಿಜೆಪಿ ಸಿಎಂ ಘೋಷಿಸಿರುವುದು ಆಘಾತಕಾರಿಯಾಗಿದೆ. ತಕ್ಷಣವೇ ಈ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಬಿರೇನ್ ಸಿಂಗ್ ಅವರು ರಾಜ್ಯದ ಮಹಿಳೆಯರು, ಸಾಮಾಜಿಕ ಕಾರ್ಯಕರ್ತರ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನೀವು ಇರುವಲ್ಲಿಯೇ ಸುರಕ್ಷಿತವಾಗಿರಿ, ಬಾರ್ಡರ್ ದೇಶಗಳಿಗೆ ಹೋಗಬೇಡಿ: ಸುಧಾಕರ್
Advertisement
Advertisement
ನಿಷೇಧಿತ ಭೂಗತ ಗುಂಪು ಕ್ರಾಂತಿಕಾರಿ ಪೀಪಲ್ಸ್ ಫ್ರಂಟ್ 1991ರ ಜನವರಿ 1 ರಿಂದ ಎಲ್ಲಾ ವಿದೇಶಿ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಿಸಿತು. ಮಣಿಪುರ ಮದ್ಯ ನಿಷೇಧ ಕಾಯಿದೆ 1991ರ ನಂತರ ರಾಜ್ಯವನ್ನು ಮದ್ಯ ಮುಕ್ತ ರಾಜ್ಯ ಎಂದು ಘೋಷಿಸಲಾಗಿತ್ತು. ಆದರೆ ಎಸ್‍ಸಿ ಮತ್ತು ಎಸ್‍ಟಿ ಸಮುದಾಯಗಳಿಗೆ ವಿನಾಯಿತಿ ನೀಡಲಾಗಿದ್ದು, ಇವರು ದೇಶದ ನಿರ್ಮಿತ ಮದ್ಯವನ್ನು ತಯಾರಿಸಲು ಹೆಚ್ಚಾಗಿ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ
Advertisement
It’s shocking that 48 hours before the campaign comes to a close, outgoing BJP CM announces that Indian Made Foreign Liquor(IMFL) shops will be opened. This is an insult to the women of Manipur! We demand an immediate withdrawal of the statement by the CM.#BJPAgainstIma pic.twitter.com/cdVajFdWqR
— Jairam Ramesh (@Jairam_Ramesh) February 25, 2022
ಗುರುವಾರ ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ನಡೆದ ಸಭೆ ವೇಳೆ ಈ ಹಿಂದೆ ಜನರು ವಿಷಪೂರಿತ ಹಳ್ಳಿಗಾಡಿನ ಮದ್ಯವನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಹಾಗಾಗಿ ಬಿಜೆಪಿ ಜನರನ್ನು “ಉಳಿಸಲು” ಅಂಗಡಿಗಳಿಂದ ಐಎಂಎಫ್‍ಎಲ್ ಮಾರಾಟ ಮಾಡಲು ಅವಕಾಶ ನೀಡುತ್ತದೆ ಎಂದು ಬಿರೇನ್ ಸಿಂಗ್ ಹೇಳಿದ್ದರು.